ಆಲೂರು: ವಿದ್ಯಾರ್ಥಿಗಳು ಮಾನವ ಹಕ್ಕುಗಳನ್ನು ಅರಿತು ಸಾರ್ವಜನಿಕರಿಗೆ ಜಾಗೃ ಮೂಡಿಸಬೇಕು ಎಂದು ಹಿರಿಯ ವಕೀಲ ಕೆ. ನಾಗರಾಜು ಹೇಳಿದರು.
ಪಟ್ಟಣದ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ ಆಲೂರು ಹಾಗೂ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಾನವ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಇರಬೇಕು. ಒಬ್ಬ ಮನುಷ್ಯನನ್ನು ಮತ್ತೂಬ್ಬ ಮನುಷ್ಯ ಮಾನವೀಯತೆಯಿಂದ ನೋಡುವುದೇ ಮಾನವ ಹಕ್ಕುಗಳ ನಿಯಮ ಎಂದರು.
ಅರಿವು ಮೂಡಿಸಿ: ನ್ಯಾಯ, ಸಮಾನತೆ, ಸ್ವಾತಂತ್ರ ಎತ್ತಿ ಹಿಡಿಯುವ ಸಲುವಾಗಿ ಮಾನವ ಹಕ್ಕುಗಳ ರಚನೆಯಾಗಿದೆ. ಮಾನವ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವಿರಬೇಕು ವಿದ್ಯಾರ್ಥಿಗಳು ಮಾನವ ಹಕ್ಕುಗಳನ್ನು ಅರಿತು ಸಾಮಾಜ್ಯ ಜನರಿಗೆ ತಿಳಿವಳಿಕೆ ನೀಡಿ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕೆಂದು ಎಂದು ತಿಳಿಸಿದರು.
ಹಕ್ಕುಗಳ ಸದ್ಬಳಕೆಯಾಗಲಿ: ವಕೀಲ ಎಚ್.ಡಿ. ಮಧು ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಸಂವಿಧಾನಾತ್ಮಕ ಹಕ್ಕುಗಳನ್ನು ಅರಿತರೆ ಜೀವನ ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ. ಪ್ರತಿಯೊಬ್ಬರಿಗೂ ಸಾಮಾನ್ಯಜ್ಞಾನ ಅಗತ್ಯ. ಸಂವಿಧಾನ ಎಲ್ಲರಿಗೂ ಮೂಲಭೂತ ಹಕ್ಕುಗಳನ್ನು ನೀಡಿದೆ. ಅವುಗಳ ಸದ್ಬಳಕೆ ಮಾಡಿಕೊಳ್ಳುವ ಜತೆಗೆ ಪ್ರತಿಯೊಬ್ಬರೂ ಕಾನೂನು ಪಾಲನೆ ಮಾಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಗಣಪತಿ, ಉಪನ್ಯಾಸಕ ವೆಂಕಟೇಶ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ರವಿಶಂಕರ್, ವಕೀಲರಾದ ಆರ್. ಬಿ. ಸುರೇಶ್, ಟಿ.ಮಂಜುನಾಥ್, ಮೋಹನ್ ಕುಮಾರ್, ನ್ಯಾಯಾಲಯ ಸಿಬ್ಬಂದಿ ಮೋಹನ್ ಸೇರೆದಂತೆ ಕಾಲೇಜು ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.