ಬಿ.ಆರ್. ಪಾಟೀಲ ಪ್ರತಿಪಾದಿಸಿದರು. ಆಳಂದ ಪಟ್ಟಣದ ಸರಕಾರಿ ಪದವಿ ಪೂರ್ವ ಬಾಲಕರ ಕಾಲೇಜಿನಲ್ಲಿ ಸೋಮವಾರ ವಿದ್ಯಾರ್ಥಿ ಸಂಘ ಹಾಗೂ ಎನ್‌ಎಸ್‌ಎಸ್ ಘಟಕ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಈಚೆಗೆ ಶಿಸ್ತು ಮಾಯವಾಗುತ್ತಿದೆ. ಬೇಡದ ವಿಷಯಗಳಲ್ಲೂ ತಮ್ಮ ಮಧ್ಯಸ್ಥಿಕೆ ವ್ಯಕ್ತಪಡಿಸುವುದು, ಸಲ್ಲದ ಸಂದರ್ಭಗಳಲ್ಲಿ ಅತಿಯಾದ ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ಸಮಸ್ಯೆಯನ್ನು ಇನ್ನಷ್ಟು ಜಟಿಲಗೊಳಿಸಿಕೊಂಡು ಒದ್ದಾಡುವುದರಿಂದ ಹೊರಬರಬೇಕು. ಇದಕ್ಕೆ ಪಾಲಕರು ಹಾಗೂ ಶಿಕ್ಷಕರು ಅಗತ್ಯ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು. ಅದ್ಯಯನಶೀಲತೆ ಜತೆಯಲ್ಲಿ ಪರಿಸರ ರಕ್ಷಣೆ ಮಾಡಬೇಕಾದ ಅನಿವಾರ್ಯತೆಯೂ ಎದುರಾಗಿದೆ. ಇದರಿಂದಾಗಿ ಮರಗಳನ್ನು ಬೆಳೆಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಕಿವಿ ಮಾತು ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ.ಡಿ. ಕಲಬುರಗಿ ಮಾತನಾಡಿ, ಈಗ ವಿದ್ಯಾರ್ಥಿಗಳ ಹೆಗಲ ಮೇಲೆ ಗುರುತರವಾದ ಜವಾಬ್ದಾರಿಗಳಿವೆ. ಒಂದೆಡೆ ಶೈಕ್ಷಣಿಕ ಸ್ಪರ್ಧೆ ಮತ್ತೂಂದೆಡೆ ಸಮಾಜದಲ್ಲಿನ ಸವಾಲುಗಳು ಎದುರಿಸುವ ನಿಟ್ಟಿನಲ್ಲಿ ತಯಾರಿ ನಡೆಸಬೇಕಾಗಿದೆ. ಪಠ್ಯದ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಸಧೃಢತೆ ಬರುತ್ತದೆ. ಇದು ನಿಮ್ಮನ್ನು ಜೀವನದಲ್ಲಿ
ಯಶಸ್ವಿ ಜೀವನ ನಡೆಸಲು ಸಹಕಾರ ನೀಡುತ್ತದೆ ಎಂದು ಹೇಳಿದರು. ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಹಾಗೂ ಪ್ರಾಧ್ಯಾಪಕ ಭಗವಂತರಾಯ ಬಳುಂಡಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೇವಿ ಸುರಗಾಳಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಅಧಿಕಾರಿ ಡಾ| ಸಂಜೀವ ರೆಡ್ಡಿ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಕಾಶಿನಾಥ ಬಿರಾದಾರ ಇದ್ದರು. ಸುಭಾಶ್ಚಂದ್ರ ಆರ್. ಕಾರ್ಯಕ್ರಮ ನಿರೂಪಿಸಿದರು. ಬಸವರಾಜ ಅಲ್ದಿ ವಂದಿಸಿದರು.
Advertisement