Advertisement

ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ತರಬೇತಿ ಅಗತ್ಯ

10:13 AM Jan 24, 2019 | Team Udayavani |

ಚಿಕ್ಕಮಗಳೂರು: ಯುವಜನತೆ ತಮ್ಮ ಬದುಕನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲೇ ಕೌಶಲ್ಯಾಧಾರಿತ ತರಬೇತಿ ಪಡೆದುಕೊಳ್ಳಬೇಕು ಎಂದು ಮಲೆನಾಡು ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಡಾ|ಡಿ.ಎಲ್‌.ವಿಜಯ್‌ಕುಮಾರ್‌ ಸಲಹೆ ಮಾಡಿದರು.

Advertisement

ನಗರದ ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಎಂಇಎಸ್‌ ವಾಣಿಜ್ಯ ಶಾಸ್ತ್ರ ವೇದಿಕೆ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಬ್ಯಾಂಕಿಂಗ್‌ ಹುದ್ದೆಗಳ ನೇಮಕಾತಿಗಾಗಿ ಮಾರ್ಗದರ್ಶನ ಹಾಗೂ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಭವಿಷ್ಯದ ಬದುಕನ್ನು ರೂಪಿಸಿಕೊಳ್ಳಲು ಕೌಶಲ್ಯಾಧಾರಿತ ತರಬೇತಿಗಳು ಅಗತ್ಯ. ಶಿಕ್ಷಣ ಸಂಸ್ಥೆಗಳು ಮತ್ತು ಸಂಘ ಸಂಸ್ಥೆಗಳು ಅಂತಹ ತರಬೇತಿ ಕಾರ್ಯಾಗಾರಗಳನ್ನು ನಡೆಸುವ ಮೂಲಕ ಯುವಜನತೆಗೆ ಮಾರ್ಗದರ್ಶನ ಮಾಡಬೇಕು ಎಂದು ಹೇಳಿದರು. ವೇದಿಕೆಯ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಮಾತನಾಡಿದರು.

ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಎನ್‌.ಕೇಶವಮೂರ್ತಿ ವಹಿಸಿದ್ದರು. ಎಂಇಎಸ್‌ ಛೇಂಬರ್‌ ಆಫ್‌ ಕಾಮರ್ಸ್‌ನ ಕಾರ್ಯದರ್ಶಿ ಕೆ.ಎನ್‌.ಮಂಜುನಾಥ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next