Advertisement

ವಿದ್ಯಾರ್ಥಿಗಳಲ್ಲಿ  ಸಮಾಜ ಸೇವಾ ಮನೋಭಾವ ಅಗತ್ಯ: ಪ್ರೊ|ಭೈರಪ್ಪ

03:45 AM Jul 03, 2017 | Team Udayavani |

ಮಂಗಳಗಂಗೋತ್ರಿ: ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ, ಶಿಸ್ತು, ಸಮಾಜಸೇವಾ ಮನೋಭಾವವನ್ನು ಬೆಳೆಸುವುದರೊಂದಿಗೆ ಉತ್ತಮ ವ್ಯಕ್ತಿತ್ವವನ್ನು ರೂಪಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪಾತ್ರ ಮಹತ್ವದ್ದಾಗಿದ್ದು, ಮಂಗಳೂರು ವಿವಿಯು ಸ್ನಾತಕೋತ್ತರ ವಿಭಾಗಗಳಲ್ಲಿ ಸಾಧಕ ರಾಷ್ಟ್ರೀಯ ಸೇವಾ ಯೋಜನೆ ಅಭ್ಯರ್ಥಿಗಳಿಗೆ ಒಂದು ಸೀಟನ್ನು ಮೀಸಲಿಟ್ಟಿದೆ ಎಂದು  ಕುಲಪತಿ ಪ್ರೊ| ಕೆ.ಭೈರಪ್ಪ ಹೇಳಿದರು.

Advertisement

ಮಂಗಳೂರು ವಿಶ್ವವಿದ್ಯಾಲಯದ ಪುರುಷರ ವಸತಿಗೃಹದ ಸಭಾಂಗಣದಲ್ಲಿ ಶನಿವಾರ ವಿಶ್ವವಿದ್ಯಾಲಯ ಮಟ್ಟದ ರಾಷ್ಟ್ರೀಯ ಸೇವಾ ಯೋಜನೆಯ ಆಯ್ಕೆ ಮತ್ತು ನಾಯಕತ್ವ ಶಿಬಿರವನ್ನು ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

ಮಂಗಳೂರು ವಿವಿಯು ರಾಷ್ಟ್ರೀಯ ಸೇವಾ ಯೋಜನೆಗೆ ಉತ್ತಮ ಪ್ರೋತ್ಸಾಹ ನೀಡುತ್ತಿದ್ದು, ಕಳೆದ ಮೂರೂವರೆ ದಶಕಗಳ ಹಿಂದೆ ಪ್ರಾರಂಭಗೊಂಡ ಮಂಗಳೂರು ವಿವಿಯ ವಿವಿಧ ಕಾಲೇಜುಗಳಲ್ಲಿ 16,607 ಶಿಬಿರಾರ್ಥಿಗಳು ಎನ್ನೆಸ್ಸೆಸ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ನೂರು ವರ್ಷಗಳ ಇತಿಹಾಸವಿರುವ ಮೈಸೂರು ವಿವಿಯಲ್ಲಿ 15 ಸಾವಿರ ಶಿಬಿರಾರ್ಥಿಗಳಿದ್ದಾರೆ ಎಂದ ಅವರು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪುಗೊಳಿಸುವ ಇಂತಹ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಂಡು ಮುನ್ನಡೆಯಬೇಕು ಎಂದರು.

ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಸಮಾಜ ಸೇವಕ ಪ್ರಸಾದ್‌ ರೈ ಕಲ್ಲಿಮಾರ್‌, ಇಂದು ಆಧುನಿಕ ಜೀವನದಲ್ಲಿ ನಾವು ಉತ್ತಮ ಭವಿಷ್ಯವನ್ನು ಕಂಡುಕೊಳ್ಳುವುದಕ್ಕೆ ಎನ್ನೆಸ್ಸೆಸ್‌ ಪೂರಕವಾಗಿದೆ  ಎಂದರು.

ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಪ್ರೊ| ವಿನಿತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. 
ಯೋಜನಾಧಿಕಾರಿ ಡಾ| ಉದಯ ಕುಮಾರ್‌ ವಂದಿಸಿದರು. ಯೋಜನಾಧಿಕಾರಿ ಪ್ರೊ| ಪ್ರಕಾಶ್‌ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next