Advertisement

ಎಲ್ಲಾ ಧರ್ಮದ ವಿದ್ಯಾರ್ಥಿಗಳು ಶಾಲೆಯ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು: ಅಮಿತ್ ಶಾ

03:51 PM Feb 21, 2022 | Team Udayavani |

ನವದೆಹಲಿ: ಕರ್ನಾಟಕದಲ್ಲಿ ತಲೆದೋರಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ (ಫೆ.21) ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ತಮ್ಮ ಧರ್ಮವನ್ನು ಮೀರಿ ಎಲ್ಲಾ ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳ ಸಮವಸ್ತ್ರ ನಿಯಮಗಳನ್ನು ಪಾಲಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ತಿಳಿಸಿದ್ದಾರೆ.

Advertisement

ಇದನ್ನೂ ಓದಿ:ಬಾಲಕಿಯ ಅಪಹರಿಸಿ ಗ್ಯಾಂಗ್ ರೇಪ್: ಗೋಣಿ ಚೀಲದಲ್ಲಿ ಕೊಳೆತ ಶವ ಪತ್ತೆ

ಸಿಎನ್ ಎನ್ ನ್ಯೂಸ್ 18ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಶಾ, ಶಾಲಾ, ಕಾಲೇಜುಗಳಲ್ಲಿ ಮಕ್ಕಳನ್ನು ಧರ್ಮಕ್ಕಿಂತ ಹೆಚ್ಚಾಗಿ ಇಡಬೇಕು. ಈ ಬಗ್ಗೆ ನನ್ನ ವೈಯಕ್ತಿಕ ಅಭಿಪ್ರಾಯ ಏನೆಂದರೆ ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಧರ್ಮವನ್ನು ಮೀರಿ ಶಾಲೆಯ ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಹಿಜಾಬ್ ಪ್ರಕರಣ ಈಗ ನ್ಯಾಯಾಲಯದಲ್ಲಿದೆ ಮತ್ತು ಕೋರ್ಟ್ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಕೋರ್ಟ್ ತನ್ನ ತೀರ್ಪನ್ನು ನೀಡುವವರೆಗೆ ನನ್ನ ವೈಯಕ್ತಿಕ ನಂಬಿಕೆ ಮೇಲೆ ವಿಶ್ವಾಸ ಇಟ್ಟಿರುತ್ತೇನೆ. ಆದರೆ ಒಂದು ವೇಳೆ ಕೋರ್ಟ್ ತನ್ನದೇ ತೀರ್ಪನ್ನು ನೀಡಿದರೆ, ಬಳಿಕ ನಾನೂ ಕೂಡಾ ಅದನ್ನು ಒಪ್ಪಿಕೊಳ್ಳುವೆ ಎಂದು ಈ ಸಂದರ್ಭದಲ್ಲಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next