Advertisement

ವಿದ್ಯಾರ್ಥಿನಿಗೆ ಗರ್ಭ: ಆರೋಪಿಗೆ ನ್ಯಾಯಾಂಗ ಬಂಧನ 

08:55 PM Apr 13, 2023 | Team Udayavani |

ವೇಣೂರು: ಅಪ್ರಾಪ್ತೆಯನ್ನು ಗರ್ಭವತಿಯನ್ನಾಗಿ ಮಾಡಿದ ನಾರಾವಿಯ ಮಂಜುನಗರ ನಿವಾಸಿ ಸಂದೇಶ್‌ (23)ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Advertisement

ಪರಿಚಯಸ್ಥ ದ್ವಿತೀಯ ಪಿಯುಸಿ ವಿದ್ಯಾರ್ಥಿಯ ಜತೆ ಸಲುಗೆ ಬೆಳೆಸಿದ್ದ ಸಂದೇಶ್‌ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ದೆ„ಹಿಕ ಸಂಪರ್ಕ ಬೆಳೆಸಿದ್ದ. ಬಾಲಕಿಯ ಆರೋಗ್ಯದಲ್ಲಿ ಬದಲಾವಣೆ ಕಂಡಾಗ ಪೋಷಕರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದು, ಬಾಲಕಿ ಎರಡು ತಿಂಗಳ ಗರ್ಭಿಣಿ ಆಗಿರುವುದು ಬೆಳಕಿಗೆ ಬಂದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ವೇಣೂರು ಠಾಣೆಯ ಪೊಲೀಸರು ಎ. 13ರಂದು ಆರೋಪಿಯನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next