Advertisement

ಬಸ್‌ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳ ಧರಣಿ

01:37 PM Jul 19, 2019 | Team Udayavani |

ಪಾವಗಡ: ಬಸ್‌ ಪಾಸ್‌ ವಿತರಣೆ ಮಾಡಿ ಸಮರ್ಪಕವಾಗಿ ಬಸ್‌ ಸೌಲಭ್ಯವಿಲ್ಲದ್ದರಿಂದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಖಾಸಗಿ ಬಸ್‌ ನಿಲ್ದಾಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

Advertisement

ವಿದ್ಯಾರ್ಥಿ ಅಂಜಲಿ ಮಾತನಾಡಿ, ದೊಮ್ಮ ತಮರಿ ಗ್ರಾಮದಿಂದ ನೂರಾರು ವಿದ್ಯಾರ್ಥಿಗಳು ಪಟ್ಟಣಕ್ಕೆ ಶಾಲೆ-ಕಾಲೇಜಿಗೆ ಬರುತ್ತಾರೆ. ಪ್ರತಿದಿನ ಖಾಸಗಿ ಬಸ್‌ಗಳಿಗೆ ಹಣ ಒದಗಿಸಲು ಎಲ್ಲರಿಗೂ ಸಾಧ್ಯವಿಲ್ಲ. ಸರ್ಕಾರಿ ಬಸ್‌ ವ್ಯವಸ್ಥೆ ಕಲ್ಪಿಸಿದರೆ ಅನುಕೂಲವಾಗುತ್ತದೆ. ಬಸ್‌ ಸೌಲಭ್ಯ ಕಲ್ಪಿಸುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ತಿಳಿಸಿದರು.

ವಿದ್ಯಾರ್ಥಿ ಮಹೇಶ್‌ ಮಾತನಾಡಿ, ಬಸ್‌ ಪಾಸ್‌ ಇದ್ದರೂ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿ ಸವಂತಾಗಿದ್ದು, ಸಂಬಂಧಪಟ್ಟವರು ಕ್ರಮ ವಹಿಸಬೇಕು ಎಂದು ಆಗ್ರಸಿದರು.

ಡಿಪೋ ಪ್ರಭಾರ ವ್ಯವಸ್ಥಾಪಕ ಹನುಮಂತ ರಾಯಪ್ಪ ಸ್ಥಳಕ್ಕೆ ಬಂದು ವಿದ್ಯಾರ್ಥಿಗಳ ಮನವಿ ಪಡೆದು ಬಸ್‌ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಧರಣಿ ಕೈ ಬಿಟ್ಟರು. ತಾಪಂ ಅಧ್ಯಕ್ಷ ಸೊಗಡು ವೆಂಕಟೇಶ್‌ ಸ್ಥಳಕ್ಕೆ ಬಂದು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಬಸ್‌ ಸೌಲಭ್ಯ ಕಲ್ಪಿಸುವಂತೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next