Advertisement

ಗ್ರಾಮೀಣ ಸಾರಿಗೆ ಅವ್ಯವಸ್ಥೆ: ಚಿಕ್ಕಬಳ್ಳಾಪುರದ ಜಾತವಾರ ಗೇಟ್ ಬಳಿ ವಿದ್ಯಾರ್ಥಿಗಳ ಪ್ರತಿಭಟನೆ

12:30 PM Feb 12, 2021 | Team Udayavani |

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕು ನಿಯಂತ್ರಣಗೊಂಡ ಬಳಿಕ ಶಾಲಾ-ಕಾಲೇಜುಗಳನ್ನು ಆರಂಭಿಸಿದರೂ ಸಹ ಸಮರ್ಪಕವಾಗಿ ಗ್ರಾಮೀಣ ಸಾರಿಗೆ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಸಾರಿಗೆ ಬಸ್ಸುಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದರು.

Advertisement

ಶಿಡ್ಲಘಟ್ಟದಿಂದ ಚಿಕ್ಕಬಳ್ಳಾಪುರ ಮಾರ್ಗವಾಗಿ ಬೆಳಗ್ಗೆಯಿಂದಗಂಟೆ 15 ನಿಮಿಷಕ್ಕೆ ಒಂದು ಸಾರಿಗೆ ಬಸ್ ಈ ಹಿಂದೆ ಕಲ್ಪಿಸಲಾಗಿತ್ತು ಆದರೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಬಸ್ ಸಂಚಾರ ಕಡಿಮೆಗೊಳಿಸಿದರಿಂದ ವಿದ್ಯಾರ್ಥಿಗಳು ಸಕಾಲಕ್ಕೆ ಶಾಲಾ-ಕಾಲೇಜುಗಳು ಹೋಗಲು ತೊಂದರೆ ಅನುಭವಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇದನ್ನೂ ಓದಿ:ಬಾಗಲಕೋಟೆ: ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ದುರ್ಮರಣ

ಶಿಡ್ಲಘಟ್ಟ- ಚಿಕ್ಕಬಳ್ಳಾಪುರ ಮಾರ್ಗದ ರಾಷ್ಟ್ರೀಯ ಹೆದ್ದಾರಿ 234 ಜಾತಿವಾರು ಬಳಿ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು. ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಸಾರಿಗೆ ವ್ಯವಸ್ಥೆ ಸಮರ್ಪಕವಾಗಿ ಇಲ್ಲದೆ ಒಂದು ಬಸ್ಸಿನಲ್ಲಿ ಅಪಾರ ಸಂಖ್ಯೆಯಲ್ಲಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು ಇದರಿಂದ ಸೋಂಕು ಹರಡುವ ಭೀತಿ ಎದುರಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Advertisement

ಶಾಲಾ-ಕಾಲೇಜಿನ ಸಮಯದಲ್ಲಿ ಸಮರ್ಪಕವಾಗಿ ಸಾರಿಗೆ ಬಸ್ಸಿನ ಸಂಚಾರ ಮಾಡಬೇಕು ಜೊತೆಗೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದಂತೆ: ಎಚ್.ವಿಶ್ವನಾಥ್ ವಾಗ್ದಾಳಿ

ವಿದ್ಯಾರ್ಥಿಗಳು ಜಾತವಾರ ಗೇಟ್ ಬಳಿ ಸಾರಿಗೆ ಬಸ್ಸುಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಮಾಹಿತಿ ತಿಳಿದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಚೇತನ್ ಗೌಡ ಹಾಗೂ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿ ಹದಿನೈದು ನಿಮಿಷಕ್ಕೊಮ್ಮೆ ಸಾರಿಗೆ ಬಸ್ಸಿನ ಸೌಲಭ್ಯ ಕಲ್ಪಿಸುವ ಜತೆಗೆ ಹೆಚ್ಚುವರಿಯಾಗಿ ಒಂದು ಸಂಚಾರವನ್ನು ಆರಂಭಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ವಾಪಸ್ ಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next