Advertisement

ನೆಚ್ಚಿನ ಶಿಕ್ಷಕನಿಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

03:11 PM Dec 03, 2019 | Team Udayavani |

ಹನೂರು: ನೆಚ್ಚಿನ ಶಿಕ್ಷಕನನ್ನು ಬೇರೆ ಶಾಲೆಗೆ ನಿಯೋಜಿಸಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಮೀಣ್ಯಂ ಗ್ರಾಮದಲ್ಲಿ ನಡೆದಿದೆ.

Advertisement

ಶಿಕ್ಷಣ ಇಲಾಖೆ ವಿರುದ್ಧ ಕಿಡಿ: ಮೀಣ್ಯಂ ಶಾಲೆ ಸಹ ಶಿಕ್ಷಕ ಮಹದೇವು ಅವರನ್ನು ಕಳೆದ 1ವಾರದ ಹಿಂದೆ ತಾಲೂಕಿನ ಲೊಕ್ಕನಹಳ್ಳಿ ಸರ್ಕಾರಿ ಶಾಲೆಗೆ ನಿಯೋಜನೆ ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶಿಸಿದ್ದರು.ಇಲಾಖಾ ಅಧಿಕಾರಿಗಳ ಈ ನಡೆ ಖಂಡಿಸಿ ವಿದ್ಯಾರ್ಥಿಗಳು ತರಗತಿಗಳಿಗೆ ತೆರಳದೆ ಪ್ರತಿಭಟನೆ ನಡೆಸಿದರು.

ಉತ್ತಮ ಸೇವೆ:ಪ್ರತಿಭಟನಾನಿರತ ವಿದ್ಯಾರ್ಥಿ ಪೋಷಕರು ಮಾತನಾಡಿ, ಲೊಕ್ಕನ ಹಳ್ಳಿ ಶಾಲೆಗೆ ನಿಯೋಜನೆಯಾಗಿರುವ ಶಿಕ್ಷಕ ರಾದ ಮಹದೇವು ಅವರು ಅತ್ಯುತ್ತಮ ಶಿಕ್ಷಕರಾಗಿದ್ದು ಪ್ರಭಾರ ಶಿಕ್ಷಕರಾದ ಬಾಲುನಾಯ್ಕ ಅಧಿಕಾರ ದುರುಪಯೋಗ, ಶಾಲಾ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಅವರನ್ನು ಬೇರೆ ಶಾಲೆಗೆ ನಿಯೋಜನೆ ಮಾಡಿವುದು ಸರಿ. ಆದರೆ ಯಾವುದೇ ತಪ್ಪು ಮಾಡದೇ ಅತ್ತುತ್ತಮ ಶಿಕ್ಷಣ ನೀಡುತ್ತಿದ್ದ ಶಿಕ್ಷಕರನ್ನು ವರ್ಗಾಯಿಸಿರುವುದು ಸರಿಯಲ್ಲ ಎಂದರು. ಅಲ್ಲದೆ ದೈಹಿಕ ಶಿಕ್ಷಣ ಶಿಕ್ಷಕರಿಲ್ಲದ ಹಿನ್ನೆಲೆ ಆ ಜವಾಬ್ದಾರಿಯನ್ನೂ ಅವರೇ ನಿರ್ವಹಿಸುತ್ತಿದ್ದರು. ಇದೀಗ ಅವರನ್ನೂ ಬೇರೆ ಶಾಲೆಗೆ ನಿಯೋಜನೆ ಮಾಡಿರುವುದು ಸರಿಯಲ್ಲ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ: ಸುದ್ದಿ ತಿಳಿದು ಸ್ಥಳಕ್ಕೆ ತೆರಳಿದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್‌.ಸ್ವಾಮಿ ಮಾತನಾಡಿ, ವಿದ್ಯಾರ್ಥಿ ಗಳು ಮತ್ತು ಪೋಷಕರ ಮನವೊಲಿಸಲು ಸಾಕಷ್ಟು ಪ್ರಯತ್ನ ನಡೆಸಿದರು. ಆದರೆ, ಇದಕ್ಕೊಪ್ಪದ ವಿದ್ಯಾರ್ಥಿಗಳು ಮತ್ತು ಪೋಷಕರು ಪಟ್ಟು ಹಿಡಿದರು.

ತೀವ್ರ ತರಾಟೆಗೆ: ಇದೇ ವೇಳೆ ಗ್ರಾಮಸ್ಥರು ಶಿಕ್ಷಣಾಧಿಕಾರಿಗಳನ್ನು ನೀವು ಏಕಪಕ್ಷೀ ಯವಾಗಿ ಕಾರ್ಯನಿರ್ವಹಿಸುತ್ತಿದ್ದೀರಾ ಎಂದು ತೀವ್ರ ತರಾಟೆಗೆ ತೆಗೆದುಕೊಂಡರು. ಬಳಿಕ ಶಿಕ್ಷಣಾಧಿಕಾರಿ ಸ್ವಾಮಿ, ಈ ಬಗ್ಗೆ ಇಲಾಖಾ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಿಳಿಸಿ ಬಂದ ದಾರಿಗೆ ಸುಂಕವಿಲ್ಲದೆ ವಾಪಸ್ಸಾದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next