Advertisement

ಉಚಿತ ಬಸ್‌ಪಾಸ್‌ಗೆ ವಿದ್ಯಾರ್ಥಿಗಳ ಪ್ರತಿಭಟನೆ

12:22 PM Jul 10, 2018 | Team Udayavani |

ಮೈಸೂರು: ವಿದ್ಯಾರ್ಥಿಗಳಿಗೆ ಉಚಿತ ಬಸ ಪಾಸ್‌ ನೀಡದ ರಾಜ್ಯಸರ್ಕಾರದ ಕ್ರಮವನ್ನು ಖಂಡಿಸಿ ಎಐಡಿಎಸ್‌ಒ, ಎಐಎಂಎಸ್‌ಎಸ್‌ ಹಾಗೂ ಎಐಡಿವೈಒ ಸಂಘಟನೆಗಳ ಆಶ್ರಯದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Advertisement

ನಗರದ ಮೆಟ್ರೋಪೋಲ್‌ ವೃತ್ತದಿಂದ ಜೆಎಲ್‌ಬಿ ರಸ್ತೆಯಲ್ಲಿ ಮೆರವಣಿಗೆ ನಡೆಸಿ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಂಧ್ಯಾ, ಈ ಹಿಂದೆ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದಾಗ ಪ್ರತಿಭಟನೆಗೆ ಮಣಿದಿದ್ದ ಸಾರಿಗೆ ಸಚಿವರು ಉಚಿತ ಬಸ್‌ಪಾಸ್‌ ನೀಡುವ ಭರವಸೆ ನೀಡಿದ್ದರು.

ಆದರೆ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಂಡಿಸಿದ ಬಜೆಟ್‌ನಲ್ಲಿ ಈ ವಿಷಯ ಪ್ರಸ್ತಾಪಿಸದೆ ಮಾತು ತಪ್ಪಿದ್ದಾರೆ. ಸರ್ಕಾರದ ಈ ವಿದ್ಯಾರ್ಥಿ ವಿರೋಧಿ ಧೋರಣೆ ಹಾಗೂ ವಚನ ಭ್ರಷ್ಟ ನೀತಿಯನ್ನು ಖಂಡಿಸಿ  ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು,

ವಿದ್ಯಾರ್ಥಿಗಳ ಹೋರಾಟಕ್ಕೆ ರಾಜ್ಯಸರ್ಕಾರ ಮಣಿಯದಿದ್ದಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿ ಮುಖಂಡರಾದ ಸೀಮಾ, ಹರೀಶ್‌, ಸುಮಾ, ಬಸವರಾಜ್‌,ಆಶಾ, ಅವಿನಾಶ್‌ ಸೇರಿದಂತೆ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next