Advertisement

ಚೌಡಳ್ಳಿಯಲ್ಲಿ ಬಸ್‌ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

04:46 PM Jul 13, 2019 | Team Udayavani |

ಮುಂಡಗೋಡ: ಸಮಯಕ್ಕೆ ಸರಿಯಾಗಿ ಬಸ್‌ ಬರದಿದ್ದಕ್ಕೆ ವಿದ್ಯಾರ್ಥಿಗಳು ತಾಲೂಕಿನ ಚೌಡಳ್ಳಿ ಗ್ರಾಮದಲ್ಲಿ ಬಸ್‌ ತಡೆದು ಪ್ರತಿಭಟನೆ ನಡೆಸಿದರು.

Advertisement

ವಿದ್ಯಾರ್ಥಿಗಳು ಪ್ರತಿದಿನ ತಡವಾಗಿ ಬರುತ್ತಿದ್ದ ಬಗ್ಗೆ ಕೇಳಿದ್ದಕ್ಕೆ ಚಾಲಕ ಯಾವುದೇ ರೀತಿಯ ಸ್ಪಂದನೆ ನೀಡದ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಹೆದರಿಸಿ ಮಳೆಗಾಲದ ಸಮಯಕ್ಕೆ ಸರಿಯಾಗಿ ಬರಲು ತೊಂದರೆಗಳು ಕಾಣಿಸಿಕೊಳ್ಳುತ್ತದೆ ಎಂದು ಹೇಳಿದ್ದಾರೆ. ಆದರೆ ಪ್ರತಿದಿನ ತಡವಾಗಿ ನಾವು ಶಾಲೆಗೆ ಹೋಗುವುದರಿಂದ ವಿದ್ಯಾಭ್ಯಾಸಕ್ಕೆ ತೊಂದರೆ ಆಗುತ್ತಿದೆ ಎಂದು ಹೇಳಿದ್ದಕ್ಕೆ ಚಾಲಕ ಉದ್ದಟತನ ಮೆರೆದಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್‌ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಸಮಾಧಾನಪಡಿಸಿ ಇನ್ನುಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂದು ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಂತರ ಪ್ರತಿಭಟನೆ ಮೊಟಕುಗೊಳಿಸಿ ವಿದ್ಯಾರ್ಥಿಗಳು ಅದೇ ಬಸ್‌ನಲ್ಲೇ ಶಾಲಾ ಕಾಲೇಜುಗಳಿಗೆ ತೆರಳಿದರು.

Advertisement

Udayavani is now on Telegram. Click here to join our channel and stay updated with the latest news.

Next