Advertisement

ಬಸ್‌ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

10:43 AM Sep 13, 2019 | Team Udayavani |

ಕಲಘಟಗಿ: ಪಟ್ಟಣದಿಂದ ಧಾರವಾಡಕ್ಕೆ ದಿನಂಪ್ರತಿ ಹೊರಡುವ ಬಸ್‌ಗಳು ಸರಿಯಾದ ಸಮಯಕ್ಕೆ ಬಾರದಿರುವುದನ್ನು ಖಂಡಿಸಿ ಬಸ್‌ ನಿಲ್ದಾಣದ ಎದುರು ಧಾರವಾಡ ಮಾರ್ಗವಾಗಿ ತೆರಳುವ ಎಲ್ಲ ಬಸ್‌ಗಳನ್ನು ತಡೆದು ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.

Advertisement

ಕಳೆದ ಒಂದು ವರ್ಷದಿಂದ ಸಮಯಕ್ಕೆ ಸರಿಯಾಗಿ ಬಸ್‌ ಬಾರದಿರುವುದು, ಮುನ್ಸೂಚನೆ ಇಲ್ಲದೇ ಏಕಾಏಕಿ ಬಸ್‌ಗಳನ್ನು ರದ್ದು ಗೊಳಿಸುವಿಕೆ ಸೇರಿದಂತೆ ಹಲವಾರು ಸಮಸ್ಯೆಗಳಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೆಲ್ಲರೂ ರೋಸಿ ಹೋಗಿದ್ದರು. ಸಮಸ್ಯೆಗಳ ಪರಿಹಾರಕ್ಕೆ ಹತ್ತಾರು ಬಾರಿ ಲಿಖೀತ ಮನವಿ ಸಲ್ಲಿಸಿದ್ದರೂ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಬಸ್‌ ತಡೆದು ಆಕ್ರೋಶ ಹೊರಹಾಕಿದರು.

ಪ್ರತಿನಿತ್ಯವೂ ಶಾಲೆ-ಕಾಲೇಜುಗಳಿಗೆ ತಡವಾಗಿ ಹೋಗುವುದರಿಂದ ವಿದ್ಯಾರ್ಜನೆಗೆ ತೊಂದರೆಯಾಗುತ್ತಿದೆ. ಪ್ರತಿನಿತ್ಯ ಬೆಳಗಿನ ಸಮಯದಲ್ಲಿ ಸರಿಯಾಗಿ ಬಸ್‌ಗಳು ಬಾರದಿರುವುದರಿಂದ ಒಂದೊಂದು ಬಸ್ಸಿನಲ್ಲಿ ಮೂರು ಬಸ್ಸಿನಷ್ಟು ಪ್ರಯಾಣಿಕರು ಸಂಚರಿಸುವಂತಾಗಿದೆ. ಅನಿರೀಕ್ಷಿತ ಹೋರಾಟ ಮಾಡಿದಾಗ ಕಾನೂನು ಕ್ರಮ ಜರುಗಿಸುವ ಪೊಲೀಸರ ಎಚ್ಚರಿಕೆಯ ಭಯವೂ ಇದೆ ಎಂದು ವಿದ್ಯಾರ್ಥಿಗಳು ಮಾಧ್ಯಮದೆದುರು ಅಳಲು ತೋಡಿಕೊಂಡರು.

ತತ್‌ಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸ್‌ ಸಿಬ್ಬಂದಿ ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದರು. ಆದರೆ, ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಶನಿವಾರ (ಸೆ.14) ಮತ್ತೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next