Advertisement
ಈ ವೇಳೆ ಕೃಷಿ ವಿವಿ ವಿದ್ಯಾರ್ಥಿ ಸಂಘದ ಸಂಚಾಲಕ ರಮೇಶ್ ಮಾತನಾಡಿ, “ಜು.2 ರಂದು ರಾಜ್ಯದ ಎಲ್ಲಾ ಕೃಷಿ ಹಾಗೂ ತೋಟಗಾರಿಕಾ ವಿವಿಗಳ ವಿದ್ಯಾರ್ಥಿಗಳು ಒಟ್ಟಾಗಿ ಸೇರಿ ಬೆಂಗಳೂರು ಚಲೋ ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದೇವೆ. ಅಂದು ಬೆಳಗ್ಗೆ 10 ಗಂಟೆಗೆ ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದ ವರೆಗೂ ಪ್ರತಿಭಟನಾ ರ್ಯಾಲಿ ಸಾಗಲಿದೆ. ರಾಜ್ಯದ 36 ಕೃಷಿ ಕಾಲೇಜು ಹಾಗೂ 2 ತೋಟಗಾರಿಕೆ ಕಾಲೇಜುಗಳ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ 4 ಗಂಟೆಗೆ ಕೃಷಿ ಸಚಿವರು,ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ. ಸಭೆಯಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಹೋರಾಟತೀವ್ರಗೊಳಿಸಲಾಗುವುದು’ ಎಂದು ತಿಳಿಸಿದರು.