Advertisement
ಹೌದು… ಬಸ್‌ಪಾಸ್ ಅವಧಿ ವಿಸ್ತರಣೆ ಮಾಡಿಕೊಳ್ಳಲು ಜೂ.30 ಕೊನೆಯ ದಿನವಾಗಿದ್ದರಿಂದ ಪದವಿ ಪೂರ್ವ, ಪದವಿ, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಸ್ ನಿಲ್ದಾಣಕ್ಕೆ ನುಗ್ಗಿದ್ದರಿಂದ ಕೆಲ ಹೊತ್ತು ನೂಕುನುಗ್ಗಲು ಉಂಟಾಗಿತ್ತು.
Related Articles
Advertisement
ಒಮ್ಮೆಲೆ ಧಾವಿಸಿದ್ದರಿಂದ ಗೊಂದಲ ಸೃಷ್ಟಿ
ಜೂ.25ರಂದು ಪದವಿ ಪೂರ್ವ, ಪದವಿ ಕಾಲೇಜು, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2 ತಿಂಗಳ ಅವಧಿಗೆ ವಿಸ್ತರಿಸಲು ಆದೇಶಿಸಿತ್ತು. ಇಲ್ಲಿಯವರೆಗೆ ಸುಮ್ಮನಿದ್ದ ವಿದ್ಯಾರ್ಥಿಗಳು ಕಡೆಯ ದಿನವಾದ ಗುರುವಾರ ಒಮ್ಮೆಲೆ ಧಾವಿಸಿದ್ದರಿಂದ ಗೊಂದಲ ಸೃಷ್ಟಿಯಾಗಿತ್ತು. ಕೂಡಲೇ ಮೇಲಧಿ ಕಾರಿಗಳಿಗೆ ಮಾಹಿತಿ ನೀಡಿದ ನಂತರ ಬಸ್‌ಪಾಸ್ ಪಡೆಯಲು ಮೂರು ದಿನಗಳ ಕಾಲ ವಿಸ್ತರಿಸಲಾಗಿದೆ. ಮೊದಲಿನ ಪಾಸ್‌ನಲ್ಲೇ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಎನ್‌ಡಬ್ಲ್ಯೂ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶೀನಯ್ಯ ಉದಯವಾಣಿಗೆ ಮಾಹಿತಿ ನೀಡಿದರು.
ಕಾಲೇಜಿನಲ್ಲಿ ಬಸ್‌ಪಾಸ್ ಅವಧಿ ವಿಸ್ತರಣೆ ಬಗ್ಗೆ ಮಾಹಿತಿ ಇರಲಿಲ್ಲ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಬಸ್‌ಪಾಸ್ ಅವಧಿ ವಿಸ್ತರಣೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದರು. ಗುರುವಾರ ಬೆಳಿಗ್ಗೆ ದ್ವಿತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳು ಬಸ್‌ಪಾಸ್‌ನ್ನು ಎರಡು ತಿಂಗಳ ಅವಧಿಗೆ ವಿಸ್ತರಿಸಬಹುದೆಂದು ಹೇಳಿದ್ದರಿಂದ ಗೊಂದಲ ಉಂಟಾಯಿತು. – ಮನೋಜ್ ಕಮ್ಮಾರ, ಸರ್ಕಾರಿ ಡಿಪ್ಲೊಮಾ
ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜುಲೈ 3ರ ವರೆಗೆ ಹಳೆಯ ಬಸ್‌ಪಾಸ್ ತೋರಿಸಿ ಬಸ್‌ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಮುಂದಿನ ಮೂರು ದಿನದೊಳಗಾಗಿ ವಿದ್ಯಾರ್ಥಿಗಳು ಬಸ್‌ಪಾಸ್ ನವೀಕರಿಸಿಕೊಳ್ಳಬಹುದಾಗಿದೆ. –ಜಿ. ಶೀನಯ್ಯ, ವಿಭಾಗೀಯ ನಿಯಂತ್ರಣಾಧಿಕಾರಿ, ಎನ್‌ಡಬ್ಲ್ಯೂ ಕೆಎಸ್‌ಆರ್‌ಟಿಸಿ