Advertisement

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗೆ ಆದ್ಯತೆ ನೀಡಲಿ

02:57 PM Dec 02, 2018 | Team Udayavani |

ರಾಯಚೂರು: ಮಕ್ಕಳು ಕೇವಲ ಪಠ್ಯಕ್ಕೆ ಸೀಮಿತಗೊಳ್ಳದೇ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚು ಆದ್ಯತೆ ನೀಡಬೇಕು. ಅಂದಾಗ ಮಾತ್ರ ನಿಮ್ಮೊಳಗಿನ ಪ್ರತಿಭೆಗೆ ಸೂಕ್ತ ವೇದಿಕೆ ಸಿಗಲು ಸಾಧ್ಯ ಎಂದು ನಗರ ಶಾಸಕ ಡಾ| ಶಿವರಾಜ ಪಾಟೀಲ ಸಲಹೆ ನೀಡಿದರು.

Advertisement

ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ , ಪಪೂ ಶಿಕ್ಷಣ ಇಲಾಖೆ, ಬಾಲಕಿಯರ ಹಾಗೂ ಬಾಲಕರ ಪಪೂ ಕಾಲೇಜುಗಳ ಸಹಯೋಗದಲ್ಲಿ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಕಲಬುರಗಿ ವಿಭಾಗೀಯ ಮಟ್ಟದ ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಂಡಷ್ಟು ಅವರ ಬುದ್ಧಿಶಕ್ತಿ ಚುರುಕುಗೊಳ್ಳಲಿದೆ. ಅಲ್ಲದೇ, ದೈಹಿಕ ಆರೋಗ್ಯವು ಸುಧಾರಿಸಲಿದೆ. ಸರ್ಕಾರದಿಂದಲೂ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕ್ರೀಡೆಯಲ್ಲೂ ಸಾಧನೆಗೆ ಸಾಕಷ್ಟು ಅವಕಾಶಗಳಿವೆ. ಮಕ್ಕಳ ಪ್ರತಿಭೆ ಆಧರಿಸಿ ಆ ಕ್ಷೇತ್ರದಲ್ಲಿ ಮುಂದುವರಿಯಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಪರಮೇಶಪ್ಪ ಮಾತನಾಡಿ, ಮಕ್ಕಳು ಸೋಲು ಗೆಲುವನ್ನು ಲೆಕ್ಕಿಸದೆ ಕ್ರೀಡೆಯಲ್ಲಿ ಪಾಲ್ಗೊಳ್ಳುವುದಕ್ಕೆ ಆದ್ಯತೆ ನೀಡಬೇಕು. ಸೋತ ಮಾತ್ರಕ್ಕೆ ಕೀಳರಿಮೆ ಹೊಂದದೆ ಮತ್ತೆ ಪ್ರಯತ್ನಿಸಬಹುದು. ಆದರೆ, ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ. ಶಿಕ್ಷಕರು ಕೂಡ ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು ಎಂದರು.

ರಾಜ್ಯಮಟ್ಟದ ಹಾಕಿಪಟು ಬಸವರಾಜ ನಾಡಗೌಡರ ಮಾತನಾಡಿದರು. ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ರವೀಂದ್ರ ಜಲ್ದಾರ್‌ ಪಾಲ್ಗೊಂಡಿದ್ದರು. ಪ್ರಾ. ಅಮರೇಶ ಪ್ರಾಸ್ತಾವಿಕ ಮಾತನಾಡಿದರು. ಉಪನಿರ್ದೇಶಕ ಸಿ.ಟಿ.ಕಲ್ಲಯ್ಯ, ನಾಗರಾಜ, ಪ್ರಕಾಶ ಕುಲಕರ್ಣಿ, ಸದಾಶಿವಪ್ಪ ಪಾಟೀಲ ಹಾಗೂ ಸರ್ಕಾರಿ,ಅನುದಾನಿತ, ಅನುದಾನ ರಹಿತ ಕಾಲೇಜುಗಳ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಪಾಲ್ಗೊಂಡಿದ್ದರು. ಆರು ಜಿಲ್ಲೆಗಳಿಂದ ಸುಮಾರು 270 ವಿದ್ಯಾರ್ಥಿಗಳು 11 ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಉಪನ್ಯಾಸಕ ಪವನಕುಮಾರ ಪ್ರಾರ್ಥಿಸಿದರು. ಅನುರಾಧಾ, ಸರಸ್ವತಿ ನಾಡಗೀತೆ ಪ್ರಸ್ತುತಪಡಿಸಿದರು. ಪ್ರಾಚಾರ್ಯ ಬೂದೆಪ್ಪ ಸ್ವಾಗತಿಸಿದರು. ಉಪನ್ಯಾಸಕ ಮಂಜುನಾಥ ಐಲಿ ನಿರೂಪಿಸಿದರು. ಉಪನ್ಯಾಸಕರ ಸಂಘದ ಅಧ್ಯಕ್ಷ ನರಸಪ್ಪ ಭಂಡಾರಿ ವಂದಿಸಿದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next