Advertisement
ಕಡೂರು ಮಾರ್ಗವಾಗಿ ತಾಲೂಕಿಗೆ ಆಗಮಿಸಿದ ಅಧ್ಯಯನ ತಂಡಕ್ಕೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಾಲೂಕಿನ ಗಡಿ ಬಸವನಹಳ್ಳಿ ಗೇಟ್ ಸಮೀಪ ಸ್ವಾಗತಿಸಿದರು.
Related Articles
Advertisement
ಗ್ರಾಮಗಳಿಗೆ ನೀರು ಪೂರೈಕೆ: ತಾಲೂಕು ಬರಅಧ್ಯ ಯನ ನಡೆಸಿದ ಬಳಿಕ ಗ್ರಾಮೀಣಾಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಭೈರೇಗೌಡ ಸುದ್ದಿಗಾರ ರೊಂದಿಗೆ ಮಾತನಾಡಿ, ತಾಲೂಕಿನಲ್ಲಿ ನಡೆಯುತ್ತಿರುವ ನರೇಗಾ ಯೋಜನೆಯಡಿ ಹಾಗೂ ಬಹುಗ್ರಾಮ ಯೋಜನೆಯಡಿ ತಾಲೂಕಿನ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಸರ್ಕಾರದ ಎರಡು ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಹೇಳಿದರು.
ಸರ್ಕಾರಕ್ಕೆ ವರದಿ: ಸಾರ್ವಜನಿಕರು ಹಾಗೂ ಜನಪ್ರತಿ ನಿಧಿಗಳೊಂದಿಗೆ ತಂಡ ಸುರ್ದೀಘ ಸಮಾಲೋಚನೆ ನಡೆಸಿದ್ದು ಮುಂದೆ ಆಗಬೇಕಿರುವ ಅಭಿವೃದ್ಧಿ ಕೆಲಸ, ಕಾರ್ಯಗಳ ಕುರಿತು ಸಂಪೂರ್ಣ ವರದಿಯನ್ನು ಸರ್ಕಾರ ಸಲ್ಲಿಸಲಾಗುವುದು. ಅಲ್ಲದೆ ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗುವುದೆಂದು ಹೇಳಿದರು.
ಶಾಸಕ ಕೆ.ಎಂ ಶಿವಲಿಂಗೇಗೌಡ ಮಾತನಾಡಿ, ಬರ ಪೀಡಿತ ಪ್ರದೇಶ ಮತ್ತು ನರೇಗಾ ಹಾಗೂ ತಾಲೂಕಿನ 530 ಹಳ್ಳಿಗಳ ಬಹುಗ್ರಾಮಗಳ ಕುಡಿಯುವ ನೀರು ಪೂರೈಕೆ ಯೋಜನೆ ಕಾಮಗಾರಿಗಳನ್ನು ಸಚಿವರಾದ ಕೃಷ್ಣೇಭೈರೇಗೌಡರು ಮತ್ತು ಜಯಮಾಲ ನೇತೃತ್ವದ ಅಧ್ಯಯನ ತಂಡ ಪರಿಶೀಲನೆ ನಡೆಸಿದೆ
ನಾನು ಹಾಗೂ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮತ್ತು ನಮ್ಮ ಅಧಿಕಾರಿಗಳ ತಂಡ ತಾಲೂಕಿಗೆ ಸಂಬಂಧಿಸಿದಂತೆ ನೈಜ್ಯ ವರದಿ ನೀಡುವ ಮೂಲಕ ಪರಿಸ್ಥಿತಿಯನ್ನು ವಿವರಿಸಿ ಮನದಟ್ಟು ಮಾಡಿ ಕೊಟ್ಟಿದ್ದೇವೆ, ಶಾಶ್ವತ ನೀರಾವರಿ ಯೋಜನೆಯಾದ ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿಯನ್ನು ಅತ್ಯಂತ ತ್ವರಿತವಾಗಿ ನಡೆಸಲು ಮನವಿ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಬೇಲೂರು ಶಾಸಕ ಲಿಂಗೇಶ್, ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್, ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಪಂ ಕಾರ್ಯಾನಿರ್ವಾಣಾಧಿಕಾರಿ ಪುಟ್ಟಸ್ವಾಮಿ, ಜಿಪಂ ಸದಸ್ಯರಾದ ಪಟೇಲ್ ಶಿವಪ್ಪ, ಮಾಡಾಳು ಸ್ವಾಮಿ, ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.