Advertisement

ಉಪ ವಿಭಾಗ ಮಟ್ಟದಲ್ಲಿ ಕುಂದು ಕೊರತೆ ಸಭೆ

05:50 PM Sep 27, 2020 | Suhan S |

ದಾವಣಗೆರೆ: ಜಿಲ್ಲಾ ಕೇಂದ್ರದಲ್ಲಿ ನಡೆಸಲಾಗುತ್ತಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯನ್ನು ಇನ್ನು ಮುಂದೆ ಉಪವಿಭಾಗ ಮಟ್ಟದಲ್ಲಿ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದರು.

Advertisement

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಪ.ಜಾತಿ, ಪ.ಪಂಗಡದವರ ಕುಂದುಕೊರತೆ ಆಲಿಕೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಲವು ಮುಖಂಡರು ತಾವು ತಾಲೂಕುಗಳಿಂದ ದಾವಣಗೆರೆ ಜಿಲ್ಲಾ ಕೇಂದ್ರಕ್ಕೆ ಬರುವುದು ಕಷ್ಟವಾಗುತ್ತದೆ ಹಾಗೂ ಅತಿ ಹೆಚ್ಚು ಜನ ಸೇರುವುದರಿಂದ ನಮ್ಮ ಸಮಸ್ಯೆಗಳ ಬಗ್ಗೆ ವಿಸ್ಕೃತವಾಗಿ ಚರ್ಚಿಸಲು ಸಾಧ್ಯವಾಗುತ್ತಿಲ್ಲ ಎಂಬ ಬೇಡಿಕೆ ಮುಂದಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಉಪವಿಭಾಗ ಮಟ್ಟದಲ್ಲಿ ಸಭೆ ನಡೆಸಲಾಗುವುದು ಎಂದರು.

ಸಾರ್ವಜನಿಕರು ಹಾಗೂ ದಲಿತ ಮುಖಂಡರ ಸಹಭಾಗಿತ್ವದಲ್ಲಿ ಅನಧಿಕೃತ ಮದ್ಯದಂಗಡಿಗಳ ತೆರವಿಗೆ ಕ್ರಮ ವಹಿಸಲಾಗುವುದು. ಅಕ್ರಮ ಗೋವು ಸಾಗಾಟದ ಬಗ್ಗೆ ನಮಗೆ ದೂರು ಬಂದಿತ್ತು. ಕಾರ್ಯಾಚರಣೆ ನಡೆಸಿ 77 ಗೋವುಗಳನ್ನು ವಶಕ್ಕೆ ಪಡೆದಿದ್ದೇವೆ ಎಂದರು. ಸೋಮ್ಲಾಪುರದ ಹನುಮಂತಪ್ಪ , ಕೆಟಿಜೆ ನಗರದಲ್ಲಿ ಒಂದು ಪೊಲೀಸ್‌ ಉಪಠಾಣೆ ಆರಂಭಿಸಬೇಕು ಎಂದು ಮನವಿ ಮಾಡಿದರು. ಜಿಲ್ಲಾ ದಲಿತ ಸಮಿತಿ ಅಧ್ಯಕ್ಷ ದುಗ್ಗಪ್ಪ ಮಾತನಾಡಿ, ಅಂಬೇಡ್ಕರ್‌ ಭವನಕ್ಕೆ ಹಣ ಮಂಜೂರಾಗಿ 15 ವರ್ಷವಾಯಿತು. ನಾವು ಎಷ್ಟೇ ಮನವಿ ಮಾಡಿದರೂ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಯಾರು ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ದೂರಿದರು.

ಮಂಜಪ್ಪ ಕೆಂಚಿಕೊಪ್ಪ ಮಾತನಾಡಿ, ಅಬಕಾರಿ ಇಲಾಖೆ ಅಧಿಕಾರಿಗಳು ಹೊನ್ನಾಳಿ ತಾಲೂಕಿನ ಯಾವ ಗ್ರಾಮಗಳಿಗೂ ಭೇಟಿ ನೀಡಿಲ್ಲ ಮತ್ತು ಅನಧಿಕೃತವಾಗಿ ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ನೀಡಿದ್ದಾರೆ. ಈ ಬಗ್ಗೆ ಅಬಕಾರಿ ಇಲಾಖೆಯವರಿಗೆ ದೂರು ನೀಡಿದರೆ ನಮ್ಮ ಮನವಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಎಸ್ಪಿಯವರಿಗೆ ತಿಳಿಸಿದರು.

Advertisement

ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್‌, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ರಾಜೀವ್‌, ನಗರಡಿವೈಎಸ್‌ಪಿ ನಾಗೇಶ್‌ ಐತಾಳ್‌, ಜಿಪಂ  ಉಪಕಾರ್ಯದರ್ಶಿ ಆನಂದ್‌, ಆರ್‌ ಟಿಒ ಅಧಿಕಾರಿ ಶ್ರೀಧರ್‌ ಮಲ್ನಾಡ್‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ್‌ಕುಮಾರ್‌, ಎಸ್‌ ಮತ್ತು ಎಸ್‌ಟಿ ಸಮಾಜದ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳುಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next