Advertisement

ಉಪ ಸಮರ: ಜಿಲ್ಲಾಧಿಕಾರಿಯಿಂದ ಪ್ರತಿಬಂಧಕಾಜ್ಞೆ

10:07 AM May 18, 2019 | Team Udayavani |

ಧಾರವಾಡ: ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮೇ 17ರಂದು ಸಂಜೆ 6 ಗಂಟೆಯಿಂದ ಮೇ 20ರಂದು ಸಂಜೆ 6 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್‌ ಆದೇಶ ಹೊರಡಿಸಿದ್ದಾರೆ.

Advertisement

ಈ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಹಾಗೂ ಸಭೆ, ಸಮಾರಂಭ ಏರ್ಪಡಿಸುವುದನ್ನು ನಿಷೇಧಿಸಿದೆ. ಈ ಅವಧಿಯಲ್ಲಿ ಚುನಾವಣಾ ಅಭ್ಯರ್ಥಿಗಳು, ಬೆಂಬಲಿಗರು ಮನೆ ಮನೆಗೆ ತೆರಳಿ ಮತ ಯಾಚಿಸಬಹುದು. ಆದರೆ ಅದರಲ್ಲಿ ಹತ್ತಕ್ಕಿಂತ ಹೆಚ್ಚು ಜನರು ಇರಕೂಡದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಶಸ್ತ್ರಾಸ್ತ್ರ ಠೇವಣಿ ಮುಂದುವರಿಕೆ: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಪಂ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಹಾಗೂ ನವಲಗುಂದ ಪುರಸಭೆ, ಕಲಘಟಗಿ-ಅಳ್ನಾವರ ಪಪಂಗಳಿಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆತ್ಮ ರಕ್ಷಣೆ, ಬೆಳೆ ಸಂರಕ್ಷಣೆ ಉದ್ದೇಶಕ್ಕಾಗಿ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಪರವಾನಗಿದಾರರಿಗೆ ಮಾ. 10ರಿಂದ ಮೇ 27ರ ವರೆಗೆ ಸಮೀಪದ ಪೊಲೀಸ್‌ ಠಾಣೆಯಲ್ಲಿ ಠೇವಣಿ ಇಡಲು ಸೂಚಿಸಲಾಗಿತ್ತು. ಈಗಾಗಲೇ ಠೇವಣಿ ಇರಿಸಿರುವ ಶಸ್ತ್ರಾಸ್ತ್ರಗಳ ಠೇವಣಿ ಅವಧಿಯನ್ನು ಮೇ 31ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್‌ ಆದೇಶ ಹೊರಡಿಸಿದ್ದಾರೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಗ್ರಾಪಂ ಉಪಚುನಾವಣೆ ಪ್ರಕ್ರಿಯೆ ಬಳಿಕ ಒಂದು ವಾರದೊಳಗೆ ಅನುಜ್ಞಪ್ತಿದಾರರಿಗೆ ಶಸ್ತ್ರಾಸ್ತ್ರಗಳನ್ನು ಹಿಂದಿರುಗಿಸಲು ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next