Advertisement

ಉಪ ಸಮರ: ಅಧಿಕಾರಿಗಳ ಸಭೆ

04:46 PM Oct 22, 2018 | |

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ವ್ಯಾಪ್ತಿಗೆ ಬೈಂದೂರು ವಿಧಾನಸಭಾ ಕ್ಷೇತ್ರ ಬರುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಮತ್ತು ಉಡುಪಿ ಜಿಲ್ಲಾಡಳಿತ ಸಮನ್ವಯದಿಂದ ಕಾರ್ಯ ನಿರ್ವಹಿಸುತ್ತಿವೆ ಎಂದು ಜಿಲ್ಲಾಧಿಕಾರಿ ಕೆ.ಎಸ್‌. ದಯಾನಂದ ತಿಳಿಸಿದರು.

Advertisement

ಭಾನುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎರಡು ಜಿಲ್ಲೆಗಳ ಹಿರಿಯ ಅಧಿಕಾರಿಗಳ ಸಮನ್ವಯ ಸಭೆಯಲ್ಲಿ ಅವರು ಮಾತನಾಡಿದರು.
ಚುನಾವಣಾ ಕರ್ತವ್ಯಕ್ಕೆ ಅಧಿಕಾರಿ, ಸಿಬ್ಬಂದಿ ನಿಯೋಜನೆ, ತರಬೇತಿ, ಸೂಕ್ತ ಪೊಲೀಸ್‌ ಬಂದೋಬಸ್ತ್ ಸಿದ್ಧತೆ, ಮತಗಟ್ಟೆಗಳ ಪರಿಶೀಲನೆ, ಮತದಾರರ ಪಟ್ಟಿ ಅಂತಿಮಗೊಳಿಸುವುದು ಸೇರಿದಂತೆ ಚುನಾವಣೆಗೆ ಸಂಬಂಸಿದ ಎಲ್ಲಾ ಕಾರ್ಯಗಳನ್ನು ನಿಯಮಾನುಸಾರ ನಡೆಸಲಾಗುತ್ತಿದೆ. ಚುನಾವಣಾ ಅಕ್ರಮಗಳ ತಡೆಗೆ ಜಿಲ್ಲೆಯ ಗಡಿ ಭಾಗಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ನೆರೆಯ ಉಡುಪಿ ಜಿಲ್ಲಾಡಳಿತದೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಬೈಂದೂರು ವಿಧಾನಸಭಾ ವ್ಯಾಪ್ತಿಗೆ ಸಂಬಂಧಿಸಿದಂತೆ ಈಗಾಗಲೇ ರಾಜಕೀಯ ಪಕ್ಷಗಳ ಸಭೆಯನ್ನು ಉಡುಪಿಯಲ್ಲಿ ನಡೆಸಲಾಗಿದ್ದು, ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ. ಫ್ಲೆಯಿಂಗ್‌ ಸ್ಕ್ವಾಡ್‌, ಸ್ಟಾಟಿಕ್‌ ಸರ್ವೇಲೆನ್ಸ್‌ ತಂಡ, ಸೆಕ್ಟರ್‌ ಅ ಧಿಕಾರಿಗಳು ಮೀಡಿಯಾ
ಮಾನಿಟರಿಂಗ್‌ ತಂಡ ಸೇರಿದಂತೆ ಎಲ್ಲಾ ತಂಡಗಳನ್ನು ರಚಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರು ಸಭೆಗೆ ಮಾಹಿತಿ ನೀಡಿದರು.

ಬೈಂದೂರು ವಲಯದಲ್ಲಿ 19 ನಕ್ಸಲ್‌ ಪೀಡಿತ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಸುಗಮ ಚುನಾವಣೆಗೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮತದಾನದ ಸಂದರ್ಭದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಗೆ ಯೋಜನೆ ರೂಪಿಸಲಾಗುತ್ತಿದೆ. ಮತದಾರರ ಮೇಲೆ ಒತ್ತಡ
ಬೀರುವಂತಹ ಶಕ್ತಿಗಳನ್ನು ಗುರುತಿಸಲಾಗಿದ್ದು, ಅಂತಹ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಿ ಸುಗಮ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಲಕ್ಷ್ಮಣ ನಿಂಬರಗಿ ಅವರು ತಿಳಿಸಿದರು.

ಚುನಾವಣಾ ಪೊಲೀಸ್‌ ವೀಕ್ಷಕ ಸೊಲೊಮನ್‌ ಯಶ್‌ ಕುಮಾರ್‌ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸುವ ಕುರಿತಾಗಿ ಎಲ್ಲಾ ಪೊಲೀಸ್‌ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡಬೇಕು. ಎರಡೂ ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳು ನಿರಂತರ ಸಂಪರ್ಕ ಹೊಂದಿರಬೇಕು. ಪರವಾನಗಿ ಹೊಂದಿರುವ ಎಲ್ಲಾ ಆಯುಧಗಳನ್ನು ಕಡ್ಡಾಯವಾಗಿ ಪೊಲೀಸ್‌ ಠಾಣೆಗಳಲ್ಲಿ ಠೇವಣಿ ಇರಿಸಬೇಕು.
ಬಾಕಿ ಇರುವ ಎಲ್ಲಾ ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Advertisement

ಚುನಾವಣಾ ವೀಕ್ಷಕ ಸಂಜಯ್‌ ಕುಮಾರ್‌ ರಾಕೇಶ್‌, ವೆಚ್ಚ ವೀಕ್ಷಕ ವಿಜಯ್‌ ಕೊಠಾರಿ, ಪೊಲೀಸ್‌ ವರಿಷ್ಠಾಧಿಕಾರಿ ಅಭಿನವ ಖರೆ, ಅಪರ ಜಿಲ್ಲಾ ಧಿಕಾರಿ ಸಂಗಪ್ಪ, ನಾಗೇಂದ್ರ ಹೊನ್ನಾಳಿ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next