ಮಹದೇವಪುರ: ಮೆಟ್ರೋ ಜತೆ ಸಬ್ ಅರ್ಬನ್ ರೈಲು ಯೋಜನೆ ಜಾರಿಯಾದರೆ ಮಾತ್ರ ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಸಾಧ್ಯ ಎಂದು ಸಂಸದ ಪಿ.ಸಿ.ಮೋಹನ್ ಅಭಿಪ್ರಾಯಪಟ್ಟರು. ಬೆಳ್ಳಂದೂರು ವಾರ್ಡ್‌ನ ಕಾರ್ಮೆಲರಾಮ್ ಸಮೀಪ ರೈಲ್ವೆ ಕ್ರಾಸಿಂಗ್ ವಿಸ್ತರಣೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ. ಟ್ರಾಫಿಕ್ ಜಾಮ್ ನಿಯಂತ್ರಿಸಲು ಮೆಟ್ರೋ ಜತೆ ಸಬ್ ರ್ಬನ್ ರೈಲು ಸೇವೆ ಆರಂಭಿಸುವುದು ಕೂಡ ಅಗತ್ಯ. ಈ ಬಗ್ಗೆ ಈಗಾಗಲೇ ರೈಲ್ವೆ ಸಚಿವರೊಂದಿಗೆ ಚರ್ಚಿಸಿದ್ದು, ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಕಾರ್ಮೆಲರಾಮ್ ಸಮೀಪ ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ 7.5 ಮೀಟರ್ ಅಗಲವಿರುವ ರೈಲ್ವೆ ಕ್ರಾಸಿಂಗ್
ಅನ್ನು 11 ಮೀಟರ್‌ಗೆ ವಿಸ್ತರಿಸಲಾಗುತ್ತಿದೆ. ಹಾಗೇ, ಈ ಸ್ಥಳದಲ್ಲಿ 42 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲು ನೀಲಿ ನಕ್ಷೆ ತಯಾರಿಸಲಾಗಿದೆ. ರಾಜ್ಯ ಸರ್ಕಾರ ಅರ್ಧದಷ್ಟು ಅನುದಾನ ಬಿಡುಗಡೆ ಮಾಡಿದ ಕೂಡಲೆ ಕಾಮಗಾರಿ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.
ಈ ಸಂಧರ್ಭದಲ್ಲಿ ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ, ಶಾಸಕ ಅರವಿಂದ ಲಿಂಬಾವಳಿ, ಪಾಲಿಕೆ ಸದಸ್ಯರಾದ ಆಶಾ ಸುರೇಶ್, ಪುಷ್ಪಾ ಮಂಜುನಾಥ, ರೈಲ್ವೆ ಇಲಾಖೆ ಅಧಿಕಾರಿ ಸಕ್ಸೇನಾ ಮತ್ತಿತರರು ಹಾಜರಿದ್ದರು.
ಸಚಿವ ಸಂಪುಟ ವಿಸ್ತರಣೆಯಿಂದ ಅತೃಪ್ತರ ಸಂಖ್ಯೆ ದ್ವಿಗುಣಗೊಂಡಿದ್ದು, ಸರ್ಕಾರ ಯಾವಾಗ ಬೇಕಾದರೂ ಉರುಳಬಹುದು. ಅತೃಪ್ತರನ್ನು ಸೆಳೆಯಲು ಬಿಜೆಪಿಯ ಯಾರೊಬ್ಬರೂ ಪ್ರಯತ್ನಿಸುತ್ತಿಲ್ಲ.
ಅರವಿಂದ ಲಿಂಬಾವಳಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ