Advertisement

Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ

07:55 PM Mar 27, 2024 | Team Udayavani |

ಬೆಂಗಳೂರು: ಏಪ್ರಿಲ್‌ 26ರಂದು ಚುನಾವಣೆ ನಡೆಯುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ.

Advertisement

ಮುಂದಿನ ಗುರುವಾರ (ಏ.4)ದವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಇರಲಿದೆ. ಏ.5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್‌ 8 ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ 14 ಕ್ಷೇತ್ರಗಳಲ್ಲಿಯೂ ಚುನಾವಣಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದಾರೆ. ಅಭ್ಯರ್ಥಿಗಳು ತಮ್ಮ ಪಕ್ಷದ ಕಾರ್ಯಕರ್ತರು, ಬೆಂಬಲಿಗರು, ಹಿತೈಷಿಗಳೊಂದಿಗೆ ಬೃಹತ್‌ ಮೆರವಣಿಗೆ, ರ್ಯಾಲಿಯೊಂದಿಗೆ ಆಗಮಿಸಿ ಚುನಾವಣಾಧಿಕಾರಿಗಳ ಕಚೇರಿಗೆ ಸೀಮಿತ ಸಂಖ್ಯೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಇದರೊಂದಿಗೆ ಚುನಾವಣಾ ಜೋಶ್‌ ಶುರುವಾಗಲಿದೆ.

ಚುನಾವಣೆ ನಡೆಸಲು ಚುನಾವಣಾ ಆಯೋಗ ಭರದ ಸಿದ್ಧತೆ ನಡೆಸಿದೆ. ನೀತಿ ಸಂಹಿತೆ ಜಾರಿಯಾದ ಹತ್ತು ದಿನದಲ್ಲೇ ಸುಮಾರು 50 ಕೋಟಿ ರೂ ಮೌಲ್ಯದ ಅಕ್ರಮಗಳನ್ನು ಜಪ್ತಿ ಮಾಡಲಾಗಿದೆ. ಜನಪ್ರತಿನಿಧಿಗಳ ಮೇಲೆ ನೀತಿ ಸಂಹಿತೆ ಉಲ್ಲಂಘಿಸಿರುವ ಹಲವು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next