Advertisement

ಸಾರ್ವಜನಿಕರಿಂದ ಅಹವಾಲು ಸಲ್ಲಿಕೆ: ಶಾಸಕ ಯು.ಟಿ.ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

12:26 PM Jul 06, 2022 | Team Udayavani |

ಉಳ್ಳಾಲ: ಕಳೆದ ಹಲವಾರು ದಿನಗಳಿಂದ ದಕ್ಷಿಣ ಕನ್ನಡ ಮತ್ತು ಮಲೆನಾಡಿನಾದ್ಯಂತ ವಿಪರೀತ ಮಳೆಯಾಗುತ್ತಿದ್ದು ನೇತ್ರಾವತಿ ನದಿ ಅಪಾಯ ಮೀರಿ ಹರಿಯುತ್ತಿದೆ. ಇದರಿಂದಾಗಿ ಹರೇಕಳ – ಅಡ್ಯಾರು ದೋಣಿ ಸಂಚಾರ ಸ್ಥಗಿತಗೊಳಿಸಲಾಗಿದ್ದು ಸಾರ್ವಜನಿಕರು ಅಡ್ಯಾರು, ಫರಂಗಿಪೇಟೆ ಹಾಗೂ ಮಂಗಳೂರು ತಲುಪಲು ಸುತ್ತಿ ಬಳಸಿಕೊಂಡು ಹೋಗಾಗಬೇಕಾಗಿದೆ. ಈ ಸಂಬಂಧ ಸಾರ್ವಜನಿಕರು ಕಾಮಗಾರಿ ಪ್ರಗತಿಯಲ್ಲಿರುವ ಹರೇಕಳ ಅಣೆಕಟ್ಟು – ಸೇತುವೆಯಲ್ಲಿ ನಡೆದುಕೊಂಡು ಹೋಗಲು ಶಾಸಕರಲ್ಲಿ ಅಹವಾಲು ಸಲ್ಲಿಸಿದ್ದು ಶಾಸಕ ಯು.ಟಿ.ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಸುರಕ್ಷತೆಯ ದೃಷ್ಟಿಯಿಂದ ಸೇತುವೆಯಲ್ಲಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದ್ದು, ಈ ಸಂಬಂಧ ಶಾಸಕ ಯು.ಟಿ.ಖಾದರ್ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು,ಸೇತುವೆ ಗುತ್ತಿಗೆದಾರರು, ಕಂದಾಯ ಇಲಾಖೆಯ ಅಧಿಕಾರಿಗಳು, ಪೋಲೀಸ್ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು, ಸದಸ್ಯರು, ಜನಪ್ರತಿನಿಧಿಗಳೊಂದಿಗೆ ಸ್ಥಳದಲ್ಲಿಯೇ ಚರ್ಚೆ ನಡೆಸಿದರು.

ಇದನ್ನೂ ಓದಿ: ಮೊದಲ ಬಾರಿಗೆ ಹಿಂದೂ ಸಂಪ್ರದಾಯ ಮೂಲಕ ದಾಂಪತ್ಯ ಜೀವನಕ್ಕೆ ಗೇ ಕಪಲ್ಸ್‌!

ಇದಕ್ಕೆ ಸಂಬಂಧಿಸಿದಂತೆ ಪಂಚಾಯತ್ ಕಛೇರಿಯಲ್ಲಿ ಸಭೆ ಕರೆದು ಸಾರ್ವಜನಿಕರ ಸುರಕ್ಷತೆಗೆ ಬೇಕಾದ ಅಗತ್ಯ ಕ್ರಮ ಕೈಗೊಂಡು ನಡೆದುಕೊಂಡು ಹೋಗಲು ಅನುಮತಿ ನೀಡುವಂತೆ ಸೂಚನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next