Advertisement

ನಗರ ಸ್ಥಳೀಯ ಸಂಸ್ಥೆಗಳ ಮೀಸಲು ಪಟ್ಟಿ ಇಂದು ಆಯೋಗಕ್ಕೆ ಸಲ್ಲಿಕೆ

06:45 AM Aug 02, 2018 | Team Udayavani |

ಬೆಂಗಳೂರು: ರಾಜ್ಯದ 215ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಮೀಸಲು ಪಟ್ಟಿ ಸಿದ್ಧಗೊಂಡಿದ್ದು, ಗುರುವಾರ (ಆ.2) ಗೆಜೆಟ್‌ ಅಧಿಸೂಚನೆ ಹೊರಡಿಸಿ ಸಂಪೂರ್ಣ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರ ಬುಧವಾರ ಹೈಕೋರ್ಟ್‌ಗೆ ಹೇಳಿದೆ.

Advertisement

ಸ್ಥಳೀಯ ಸಂಸ್ಥೆಗಳ ಮೀಸಲು ಪಟ್ಟಿ ಸಲ್ಲಿಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾ.ಆರ್‌.ದೇವದಾಸ್‌ ಅವರಿದ್ದ ವಿಭಾಗೀಯಪೀಠ ಬುಧವಾರ ನಡೆಸಿತು.

ವಿಚಾರಣೆ ವೇಳೆ ಅಡ್ವೊಕೇಟ್‌ ಜನರಲ್‌ಉದಯ್‌ ಹೊಳ್ಳ, ಇನ್ನು ಏಳು ಸ್ಥಳೀಯ ಸಂಸ್ಥೆಗಳ ಮೀಸ ಲು ನಿಗದಿ ಮಾತ್ರ ಬಾಕಿ ಉಳಿದಿದೆ. ಬುಧವಾರ ಸಂಜೆ ವೇಳೆಗೆ ಗೆಜೆಟ್‌ ಅಧಿಸೂಚನೆ ಹೊರಡಿಸಿ, ಆ.2ರಂದು ಪಟ್ಟಿ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು. ಹೇಳಿಕೆ ದಾಖಲಿಸಿಕೊಂಡು ನ್ಯಾಯಪೀಠ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next