ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು.
Advertisement
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜನ ಸ್ಪಂದನ ಕಾರ್ಯಕ್ರಮದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಅನೇಕ ಸಮಸ್ಯೆಗಳ ಕುರಿತು ಗುರುವಾರ ನಡೆಯಲಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಗುರಿ ಸರ್ಕಾರಹೊಂದಿದ್ದು, ಜಿಲ್ಲೆಯ ಎಲ್ಲ ತಾಲೂಕಿನ ಹಾಗೂ ಗ್ರಾಮೀಣ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಮಾಡಬೇಕು. ಜನದಟ್ಟಣೆ ನಿಯಂತ್ರಣಕ್ಕೆ 50 ಜನ ಸ್ವಯಂ ಸೇವಕರನ್ನು ನೇಮಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮುಖ್ಯವಾಗಿ ಕಂದಾಯ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಅಂಗವಿಕಲರ ವೇತನ, ವೃದ್ಧಾಪ್ಯ ವೇತನಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗುವ ಸಂಭವವಿದ್ದು, ಜಿಲ್ಲೆಯ ಎಲ್ಲ ತಾಲೂಕಿನ ತಹಶೀಲ್ದಾರರು ಭಾಗವಹಿಸಬೇಕು.
Related Articles
Advertisement
ಜನಸ್ಪಂದನ ಸಭೆಗೆ ಸಂಬಂಧಿಸಿದಂತೆ ಆಯಾ ಇಲಾಖಾವಾರು ಅಧಿಕಾರಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಚಾಚು ತಪ್ಪದೇ ನಿರ್ವಹಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ.ರಾಜಾ, ಸಹಾಯಕ ಆಯುಕ್ತ ರಾಹುಲ ಪಾಂಡ್ವೆ, ಮಹಾನಗರ ಪಾಲಿಕೆ ಆಯುಕ್ತೆ ಬಿ.ಫೌಜಿಯಾ ತರುನ್ನುಮ್, ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.