Advertisement

ಅಹವಾಲು ಸಲ್ಲಿಸಿ ಪರಿಹಾರ ಪಡೆಯಲು ಮನವಿ

07:14 AM Feb 28, 2019 | |

ಕಲಬುರಗಿ: ನಗರದಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಫೆ.28ರಂದು ಬೆಳಗ್ಗೆ 11:00ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬೃಹತ್‌ ಮಟ್ಟದ ಜನಸ್ಪಂದನ ಸಭೆ ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನಿಗದಿತ ಕೌಂಟರ್‌ಗಳಲ್ಲಿ ಸಲ್ಲಿಸಿ ಪರಿಹಾರ
ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಮನವಿ ಮಾಡಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜನ ಸ್ಪಂದನ ಕಾರ್ಯಕ್ರಮದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಅನೇಕ ಸಮಸ್ಯೆಗಳ ಕುರಿತು ಗುರುವಾರ ನಡೆಯಲಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಗುರಿ ಸರ್ಕಾರ
ಹೊಂದಿದ್ದು, ಜಿಲ್ಲೆಯ ಎಲ್ಲ ತಾಲೂಕಿನ ಹಾಗೂ ಗ್ರಾಮೀಣ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

ಜನಸ್ಪಂದನ ಕಾರ್ಯಕ್ರಮ ಬೆಳಗ್ಗೆ 10:00ರಿಂದ ಸಂಜೆ 5:00ರ ವರೆಗೆ ನಡೆಯಲಿದೆ. ಇದರಲ್ಲಿ ವಿವಿಧ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಉಪಸ್ಥಿತರಿರಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಅಚ್ಚುಕಟ್ಟಾಗಿ ಇಲಾಖಾವಾರು ಸ್ಟಾಲ್‌ಗ‌ಳನ್ನು ನಿರ್ಮಿಸಿ ಅದರ ಮೇಲೆ ಇಲಾಖೆ ನಾಮಫಲಕ ಹಾಕಬೇಕು. ಪ್ರತಿ ಸ್ಟಾಲ್‌ಗ‌ಳಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಖುದ್ದಾಗಿ ಹಾಜರಿದ್ದು, ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಬೇಕು. ಜನಸ್ಪಂದನಕ್ಕೆ ಬರುವ ಸಾರ್ವಜನಿಕರ ಜನದಟ್ಟಣೆಯಾಗದಂತೆ ಸುಗಮವಾಗಿ ಸಂಚಾರ ವ್ಯವಸ್ಥೆ
ಮಾಡಬೇಕು. ಜನದಟ್ಟಣೆ ನಿಯಂತ್ರಣಕ್ಕೆ 50 ಜನ ಸ್ವಯಂ ಸೇವಕರನ್ನು ನೇಮಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಮುಖ್ಯವಾಗಿ ಕಂದಾಯ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಅಂಗವಿಕಲರ ವೇತನ, ವೃದ್ಧಾಪ್ಯ ವೇತನಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗುವ ಸಂಭವವಿದ್ದು, ಜಿಲ್ಲೆಯ ಎಲ್ಲ ತಾಲೂಕಿನ ತಹಶೀಲ್ದಾರರು ಭಾಗವಹಿಸಬೇಕು.

ಕಲಬುರಗಿ ನಗರದಲ್ಲಿ ನಡೆಯುವ ಬೃಹತ್‌ ಜನಸ್ಪಂದನ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸುವ ಕೆಲವು ರಸ್ತೆಗಳ ಮಾರ್ಗ ಬದಲಾವಣೆ ಮಾಡುವುದಲ್ಲದೇ ಸೂಕ್ತ ಪೊಲೀಸ್‌ ಬಂದೋಬಸ್ತ ವ್ಯವಸ್ಥೆ ಮಾಡಬೇಕು ಎಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಜನಸ್ಪಂದನ ಸಭೆಗೆ ಸಂಬಂಧಿಸಿದಂತೆ ಆಯಾ ಇಲಾಖಾವಾರು ಅಧಿಕಾರಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಚಾಚು ತಪ್ಪದೇ ನಿರ್ವಹಿಸಬೇಕು ಎಂದು ಹೇಳಿದರು. 

ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ.ರಾಜಾ, ಸಹಾಯಕ ಆಯುಕ್ತ ರಾಹುಲ ಪಾಂಡ್ವೆ, ಮಹಾನಗರ ಪಾಲಿಕೆ ಆಯುಕ್ತೆ ಬಿ.ಫೌಜಿಯಾ ತರುನ್ನುಮ್‌, ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next