Advertisement

ಶೀಘ್ರ ಕಾಮಗಾರಿ ಪ್ರಸ್ತಾವನೆ ಸಲ್ಲಿಸಿ

05:46 PM Jun 17, 2021 | Team Udayavani |

ಬಸವಕಲ್ಯಾಣ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಡಿ ಕೈಗೊಳ್ಳಬೇಕಾದ ಕಾಮಗಾರಿ ಹಾಗೂ ಅವಶ್ಯಕವಿರುವ ಸಾಮಾಗ್ರಿಗಳ ಕ್ರಿಯಾ ಯೋಜನೆ ತಯಾರಿಕೆ ಕುರಿತು ಶಾಸಕ ಶರಣು ಸಲಗರ ಅಧ್ಯಕ್ಷತೆಯಲ್ಲಿ ನಗರದ ತಾ.ಪಂ. ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಯಿತು.

Advertisement

ಶಾಸಕ ಶರಣು ಸಲಗರ ಮಾತನಾಡಿ, ಕೆ.ಕೆ. ಆರ್‌.ಡಿ.ಬಿಯಡಿ 25.67 ಕೋಟಿ ರೂ.ಗಳ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ. ಅದರಲ್ಲಿ ಬಸವಕಲ್ಯಾಣ ಅಭಿವೃದ್ಧಿ ಹಿತದೃಷ್ಟಿಯಿಂದ ಯಾವ ಕೆಲಸಗಳು ಮಾಡಬಹುದು ಎಂಬುವುದರ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ನಂತರ ಸಾರ್ವಜನಿಕರ ಅನುಕೂಲಕ್ಕಾಗಿ ನಿಮ್ಮ ಇಲಾಖೆಯಲ್ಲಿ ಇರುವ ಸಮಸ್ಯೆಗಳ ಬಗ್ಗೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದರೆ ಅವುಗಳನ್ನು ಶೀಘ್ರವಾಗಿ ಕೆಕೆಆರ್‌ಡಿಬಿ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಳ್ಳಬಹುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಭಾಗವಹಿಸಿದ ವಿವಿಧ ಇಲಾಖೆ ಅಧಿಕಾರಿಗಳು ಕೆ.ಕೆ. ಆರ್‌.ಡಿ.ಬಿ. ಬಾಕಿ ಉಳಿದುಕೊಂಡಿರುವ ಹಾಗೂ ಮುಂದೆ ಆಗಬೇಕಾದ ಕಾಮಗಾರಿಗಳ ಬಗ್ಗೆ ಶಾಸಕ ಶರಣು ಸಲಗರ ಗಮನಕ್ಕೆ ತಂದರು. ನಂತರ ಶಾಸಕ ಶರಣು ಸಲಗರ ಮಾತನಾಡಿ, ತಾಲೂಕಿನಲ್ಲಿ ಬಾಕಿ ಇರುವ ಶಾಲಾ ಕಟ್ಟಡಗಳನ್ನು ತೆರವುಗೊಳಿಸಿ, ಶೀಘ್ರವಾಗಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಬೇಕು. ಹಳೆ ತಹಶೀಲ್ದಾರ್‌ ಕಟ್ಟಡ ತೆರವುಗೊಳಿಸಿ ನೂತನ ನ್ಯಾಯಾಲಯ ನಿರ್ಮಾಣ ಕಾಮಗಾರಿ ಪ್ರಾರಂಭಿಸಬೇಕು.ಇದಕ್ಕಾಗಿ ಈಗಾಗಲೇ 14 ಕೋಟಿ ರೂ. ಅನುದಾನ ಮಂಜೂರಾಗಿವೆ ಎಂಬುವುದು ನನ್ನ ಗಮನಕ್ಕೆ ಬಂದಿದೆ.

ಅದಕ್ಕೆ ಇನ್ನೂ ಹೆಚ್ಚಿನ ಅನುದಾನ ಬೇಕಾದರೂ ನೀಡಲಾಗುವುದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಪ್ರಾರಂಭಿಸಬೇಕು. ಇಲ್ಲದಿದ್ದರೆ ಕೆಲಸ ಆಗುವವರೆಗೂ ನಿಮ್ಮ ಬೆನ್ನು ಬಿಡುವುದಿಲ್ಲ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ತಹಶೀಲ್ದಾರ್‌ ಸಾವಿತ್ರಿ ಶರಣು ಸಲಗರ, ತಾ.ಪಂ. ಇಒ ಬೀರೇಂದ್ರಸಿಂಗ್‌ ಠಾಕೂರ್‌, ಹುಲಸೂರ ಇಒ ಖಾಲಿದ ಅಲಿ ಎಡಿಗಳಾದ ಸಂತೋಷ ಚವ್ಹಾಣ, ಜೈಪ್ರಕಾಶ ಚವ್ಹಾಣ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next