Advertisement
ಸುಬ್ರಹ್ಮಣ್ಯ ಗ್ರಾ.ಪಂ ಅಧ್ಯಕ್ಷೆ ಸುಶೀಲಾ ಹೊಸಮನೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾಲೂಕು ಪಂಚಾಯತ್ ಸದಸ್ಯೆ ಅಶೋಕ್ ನೆಕ್ರಾಜೆ, ಸ.ಶಿ.ಅ.ಸೇ. ಯೋಜನೆಯ ಅಧಿಕಾರಿ ಸರಸ್ವತಿ, ಬಾಲವಿಕಾಸ ಸಮಿತಿ ಅಧ್ಯಕ್ಷ ಪ್ರಶಾಂತ್ ಭಟ್ ಮಾಣಿಲ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯೆ ವಿಮಲಾ ರಂಗಯ್ಯ, ಕೊಲ್ಲಮೊಗ್ರು ವಲಯ ಮೇಲ್ವಿಚಾರಕಿ ಉಷಾ ಪಿ. ರೈ, ಅಂಗನವಾಡಿ ಕಾರ್ಯಕರ್ತೆ ವೇದಿಕೆಯಲ್ಲಿದ್ದರು. ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀ ಹಾಗೂ ಗುತ್ತಿಗೆದಾರ ಲೋಕೇಶ್ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಪಿಡಿಒ ಮುತ್ತಪ್ಪ ಸ್ವಾಗತಿಸಿ, ಕಾರ್ಯದರ್ಶಿ ಮೋನಪ್ಪ ಡಿ ವಂದಿಸಿದರು. ಗ್ರಾ.ಪಂ. ಉಪಾಧ್ಯಕ್ಷ ರಾಜೇಶ್ ಎನ್. ಎಸ್. ಕಾರ್ಯಕ್ರಮ ನಿರೂಪಿಸಿದರು.
ಸುಬ್ರಹ್ಮಣ್ಯ ಕಾಶಿಕಟ್ಟೆ ಬಳಿ ಈ ಹಿಂದಿನ ಅಂಗನವಾಡಿ ಕೇಂದ್ರ ಶಿಥಿಲ ಸ್ಥಿತಿಗೆ ತಲುಪಿತ್ತು. ಕಿರಿದಾದ ಕೊಠಡಿಯೊಳಗೆ ಪುಟಾಣಿಗಳು ಸಂಕಷ್ಟ ಅನುಭವಿಸುತ್ತಿದ್ದರು. ಕೇಂದ್ರದೊಳಗೆ ಹಾವು, ಚೇಳುಗಳು ಹೊಕ್ಕು ಮಕ್ಕಳಲ್ಲಿ ಭಯದ ವಾತಾವರಣ ಸೃಷ್ಟಿಗೊಂಡಿತ್ತು. ನೂತನ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಮುಂದಾಗಿದ್ದರೂ ಕಾಮಗಾರಿ ನಿಧಾನಗತಿಯಲ್ಲಿ ಸಾಗಿ ಬಳಕೆಗೆ ಸಿಕ್ಕಿರಲಿಲ್ಲ. ಈ ಕುರಿತು ‘ಉದಯವಾಣಿ’ ಸುದಿನದಲ್ಲಿ ಎರಡು ಬಾರಿ ಅಂಗನವಾಡಿ ಕೇಂದ್ರದ ಮಕ್ಕಳು, ಸಿಬಂದಿ ಅನುಭವಿಸುತ್ತಿರುವ ತೊಂದರೆಗಳ ಕುರಿತು ವರದಿ ಪ್ರಕಟಿಸಿ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಬಳಿಕ ಕಾಮಗಾರಿಗಳು ಚುರಕುಗೊಂಡು ಕೇಂದ್ರ ಲೋಕಾರ್ಪಣೆಗೊಂಡಿದೆ.