ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರು ಡಿ. 22ರಂದು ಬೆಳಗಿನ ಜಾವ ಎಂದಿನಂತೆ ಅರ್ಚಕ ವೃತ್ತಿ ನಿರ್ವಹಿಸಲು ಮಠಕ್ಕೆ ತೆರಳಿ ಕೆಲಸ ಮುಗಿಸಿಕೊಂಡು ಬೆಳಗ್ಗೆ ಮನೆಗೆ ಬಂದಾಗ ಮನೆಯ ಮುಂಬಾಗಲಿನ ಬೀಗವನ್ನು ತೆಗೆದಿದ್ದು ಕಂಡುಬಂದಿತ್ತು. ಮನೆಯ ಒಳಪ್ರವೇಶಿಸಿ ನೋಡಿದಾಗ ಗಾದ್ರೇಜ್ ತೆರೆದಿದ್ದು, ಪರಿಶೀಲಿಸಿದಾಗ ಗಾದ್ರೇಜ್ ಒಳಗಡೆ ಪರ್ಸ್ನಲ್ಲಿಟ್ಟಿದ್ದ ಸುಮಾರು 25 ಸಾವಿರ ರೂ. ಹಣ ಮತ್ತು 1.15 ಲಕ್ಷ ರೂ. ಮೌಲ್ಯದ ಸುಮಾರು 23 ಗ್ರಾಂ ಚಿನ್ನಾಭರಣ ಕಳವಾಗಿರುವುದು ಕಂಡುಬಂದಿದೆ. ಸುಬ್ರಹ್ಮಣ್ಯ ಪೊಲೀಸರು ಹಾಗೂ ತನಿಖಾ ತಂಡದ ಸಿಬಂದಿ ಘಟನ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement