Advertisement
ಸುಬ್ರಹ್ಮಣ್ಯ ಹಾಗೂ ಪಂಜ ಪರಿಸರದಲ್ಲಿ ಗಾಳಿ ಮಳೆಗೆ ಅಪಾರ ಹಾನಿ ಉಂಟಾಗಿದೆ. ಐನೆಕಿದು ಗ್ರಾಮದ ಕೋಟೆ ವಿಜಯ ಎಂಬವರ ಮನೆ ಮೇಲೆ ಮರ ಬಿದ್ದು ಹಾನಿಯುಂಟಾಗಿದೆ. ಏನೆಕಲ್ಲು ಗ್ರಾಮದಲ್ಲಿ ಅಂಗಡಿ ಶೀಟು ಗಾಳಿಗೆ ಹಾರಿ ಹೋಗಿವೆ. ಗ್ರಾ.ಪಂ. ಸಂಜೀವಿನಿ ಕಟ್ಟಡದ ಎದುರಿನ ತಾತ್ಕಾಲಿಕ ತರಕಾರಿ ಅಂಗಡಿ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ತಂಡ ಹಲವೆಡೆ ಮರಗಳನ್ನು ತೆರವುಗೊಳಿಸಲು ಸಹಕರಿಸಿತು. ಪಂಬೆತ್ತಾಡಿ ಗ್ರಾ.ಪಂ. ಉಪಾಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ, ರಜೀತಾ ಭಟ್ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯರ ಸಹಕಾರದೊಂದಿಗೆ ಮರಗಳ ತೆರವಿಗೆ ನೆರವಾದರು. ವಿದ್ಯುತ್ ಕಂಬಗಳಿಗೆ ಹಾನಿಯಾದಲ್ಲಿ ಮೆಸ್ಕಾಂ ಲೈನ್‌ಮೆನ್, ಸಿಬಂದಿ ಅವಿರತ ಶ್ರಮದಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜನ ಪ್ರತಿನಿಧಿಗಳು, ಗ್ರಾ.ಪಂ. ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಕಂದಾಯ ಇಲಾಖೆಯವರು ಹಾನಿಯ ಲೆಕ್ಕ ಹಾಕುತ್ತಿದ್ದಾರೆ.
Related Articles
ರೆಂಜಿಲಾಡಿ ಗ್ರಾಮದ ಸಾಕೋಟೆ ಜಾಲು ತಲೆಕ್ಕಿ ಎಂಬಲ್ಲಿ ಮರಗಳು ಬಿದ್ದು ನಾಲ್ಕು ವಿದ್ಯುತ್ ಕಂಗಳು ತುಂಡಾಗಿದ್ದು ವಿದ್ಯುತ್ ಸಂಪರ್ಕ ಕಡಿಗೊಂಡಿತ್ತು. ಸ್ಥಳೀಯರ ಸಹಕಾರದಿಂದ ಮರ ತೆರವು ಗೊಳಿಸಲಾಗಿದೆ. ವಿದ್ಯುತ್ ಲೈನ್ ದುರಸ್ತಿಗೆ ಮೆಸ್ಕಾಂ ಇಲಾಖೆ ಸಿಬಂದಿ ಶ್ರಮಿಸಿದರು. ಕಲ್ಲುಗುಡ್ಡೆ ಸಂಪರ್ಕದ ವಿದ್ಯುತ್ ಲೈನ್ ಮೇಲೆ ಕಡಬ ಭಾಗದ ಹಲವೆಡೆ ಮರಗಳು ಬಿದ್ದು ಹಾನಿ ಸಂಭವಿಸಿದೆ. ಗುರುವಾರ ಸಂಜೆವರೆಗೂ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.
Advertisement