Advertisement

ಸುಬ್ರಹ್ಮಣ್ಯ: ಗಾಳಿ ಮಳೆಗೆ ಮರ ಬಿದ್ದು ಮಹಿಳೆ ಮೃತ್ಯು…

09:54 PM May 15, 2024 | Team Udayavani |

ಸುಬ್ರಹ್ಮಣ್ಯ: ತೋಟಕ್ಕೆ ತೆರಳಿದ್ದ ವೇಳೆ ಗಾಳಿ-ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.

Advertisement

ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬಸವನಮೂಲೆ ನಿವಾಸಿ ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ ಬಸವನಮೂಲೆ (65) ಮೃತರು. ಮೃತರು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಮೀನಾಕ್ಷಿ ಅವರು ತಮ್ಮ ತೋಟದಲ್ಲಿ ಕಟ್ಟಿದ್ದ ಜಾನುವಾರು ಬಿಡಿಸಿ ತರಲು ಸಂಜೆ ತೆರಳಿದ್ದ ವೇಳೆ ಗಾಳಿ-ಮಳೆಗೆ ತೋಟದಲ್ಲಿನ ಮರವೊಂದು ಇವರ ಮೇಲೆ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತರಾಗಿದ್ದಾರೆ.

ಇದನ್ನೂ ಓದಿ: Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

Advertisement

Udayavani is now on Telegram. Click here to join our channel and stay updated with the latest news.

Next