ಸುಬ್ರಹ್ಮಣ್ಯ: ಕಳೆದ ಮಾರ್ಚ್ 23ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪಾರ್ಕಿಂಗ್ ಸ್ಥಳದಲ್ಲಿ ಯಾರೋ ಅಪರಿಚಿತರು ಕಾರಿನಲ್ಲಿ ಬಂದು ದನವನ್ನು ಕದಿಯಲು ಪ್ರಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.
Advertisement
ಉಮ್ಮರ್ ಫಾರೂಕ್ ಬಂಧಿತ ಆರೋಪಿ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನುಳಿದ ಮೂವರು ಆರೋಪಿಗಳ ಪತ್ತೆಗೂ ಪೊಲೀಸರು ಬಲೆ ಬೀಸಿದ್ದಾರೆ.