Advertisement

Subramanya; ಕುಕ್ಕೆಗೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ

11:38 PM Jan 26, 2024 | Team Udayavani |

ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶುಕ್ರವಾರ ಸಂಜೆ ಭೇಟಿ ನೀಡಿದರು.

Advertisement

ಅವರನ್ನು ಶ್ರೀ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಪುಷ್ಪಗುತ್ಛ ನೀಡಿ ಬರಮಾಡಿಕೊಂಡರು. ಬಳಿಕ ಅವರು ಆದಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದು ಸೇವೆ ನೆರವೇರಿಸಿ ಮೃತ್ತಿಕಾ ಪ್ರಸಾದ ಸ್ವೀಕರಿಸಿದರು. ಬಳಿಕ ಅವರು ಹೊಸಳಿಗಮ್ಮನ ದರುಶನ ಪಡೆದರು.

ಆಶ್ಲೇಷಾ ಬಲಿ
ಶನಿವಾರ ಬೆಳಗ್ಗೆ ಮಾಜಿ ಪ್ರಧಾನಿ ಆಶ್ಲೇಷಾ ಬಲಿ ಸೇವೆ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನದ ಮಹಾಪೂಜೆ ವೀಕ್ಷಿಸಿ ಮಹಾಪೂಜಾ ಸೇವೆ ನೆರವೇರಿಸಲಿದ್ದಾರೆ.

ಸೌತಡ್ಕಕ್ಕೆ ಭೇಟಿ
ದೇವೆಗೌಡರು ಶುಕ್ರವಾರ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪತ್ನಿ ಚೆನ್ನಮ್ಮ ಸಹಿತ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ಹರೀಶ್‌ ರಾವ್‌ ಮುಂಡ್ರುಪಾಡಿ, ಮಲ್ಲಿಕಾ ಪ್ರಶಾಂತ್‌ ಪಕಳ ಮಲಾರ್ಬೀಡು ಮುಂತಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next