Advertisement

ಮಿನಿ ಉದ್ಯೋಗ ಮೇಳ ಯಶಸ್ವಿಗೊಳಿಸಿ

09:55 AM Feb 22, 2019 | |

ವಿಜಯಪುರ: ನಗರದ ದರ್ಬಾರ ಹೈಸ್ಕೂಲ್‌ ಮೈದಾನದಲ್ಲಿ ಫೆ.23 ರಿಂದ ಆರಂಭಗೊಳ್ಳಲಿರುವ ಅವಳಿ ಜಿಲ್ಲೆಯ ಮಿನಿ ಉದ್ಯೋಗ ಮೇಳದಲ್ಲಿ ಯಾವುದೇ ಲೋಪ ಜರುಗಬಾರದು. ಎಲ್ಲ ರೀತಿಯ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಎಸ್‌.ಬಿ. ಶೆಟ್ಟೆಣ್ಣವರ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಿನಿ ಉದ್ಯೋಗ ಮೇಳದ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಉದ್ಯೋಗ ಮೇಳದ ಕುರಿತು ವಿವಿಧ ಸಮಿತಿಗಳನ್ನು ನೇಮಕ ಮಾಡುವುದರ ಮೂಲಕ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ. ಅದರಂತೆ ಈವರೆಗೂ ಸಿದ್ಧತಾ ಕಾರ್ಯ ನಡೆದಿದೆ. ಅಂತಿಮ ಹಂತದ ಸಿದ್ಧತೆಗಳನ್ನು ಸಂಬಂಧಿಸಿದ ಸಮಿತಿಯವರು ಇನ್ನಷ್ಟು ಹೆಚ್ಚಿನ ಜವಾಬ್ದಾರಿಯಿಂದ ಚುರುಕಾಗಿ ನಿರ್ವಹಿಸಲು ಸೂಚನೆ ನೀಡಿದರು.

ಈವರೆಗೆ 4,600 ನಿರುದ್ಯೋಗಿಗಳು ಉದ್ಯೋಗಕ್ಕಾಗಿ ಹೆಸರು ನೋಂದಾಯಿಸಿ ಕೊಂಡಿದ್ದಾರೆ. ಉದ್ಯೋಗ ಮೇಳಕ್ಕೆ ಆಗಮಿಸುವ ಉದ್ಯೋಗಾಕಾಂಕ್ಷಿಗಳಿಗೆ ಗೊಂದಲ ಉಂಟಾಗದಂತೆ ಸೂಕ್ತ ಮಾರ್ಗದರ್ಶನ ನೀಡಲು ಕೌಂಟರ್‌ ತೆರೆಯಬೇಕು. ಉದ್ಯೋಗದಾತರ  ಬೇಡಿಕೆಗಳನ್ವಯ ಉದ್ಯೋಗಾಕಾಂಕ್ಷಿಗಳ ವರ್ಗೀಕರಣ ಮಾಡಿ, ಅನುಕೂಲಕರವಾಗುವಂತೆ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. 

ಉಳಿದಂತೆ ವಿವಿಧ ಸಮಿತಿಗಳು ಕೊನೆಯ ಹಂತದ ಸಿದ್ಧತೆಗಳನ್ನು ಪೂರ್ಣಗೊಳಿಸಿ ಉದ್ಯೋಗ ಮೇಳ ಯಶಸ್ವಿಗೊಳಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಡಾ| ಔದ್ರಾಮ, ತಹಶೀಲ್ದಾರ್‌ ಮೋಹನಕುಮಾರಿ, ಕೌಶಲಾಭಿವೃದ್ಧಿ ಅಧಿಕಾರಿ ರಮೇಶ ದೇಸಾಯಿ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next