Advertisement

ನಿರಂತರ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ

12:34 PM Apr 22, 2017 | |

ಮೈಸೂರು: ನಿರಂತರ ಪರಿಶ್ರಮದಿಂದ ಮಾತ್ರ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಬೆಂಗಳೂರಿನ ಸೇವಾ ತೆರಿಗೆ ಆಯುಕ್ತ ಜಿ.ನಾರಾಯಣಸ್ವಾಮಿ ಹೇಳಿದರು. ಮೈಸೂರು ವಿವಿ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ, ಪ.ಜಾತಿ/ ಪರಿಶಿಷ್ಟ ವರ್ಗಗಳ ವಿಶೇಷ ಘಟಕ, ಶತಮಾನೋತ್ಸವ ಭವನಗಳ ಜಂಟಿ ಆಶ್ರಯದಲ್ಲಿ ಶುಕ್ರವಾರ ಮಾನಸಗಂಗೋತ್ರಿಯ ಸೆನೆಟ್‌ ಭವನದಲ್ಲಿ ಏರ್ಪಡಿಸಲಾಗಿದ್ದ ಎರಡು ದಿನಗಳ ಬೌದ್ಧಿಕ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

Advertisement

ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತಯಾರಿ ನಡೆಸುತ್ತಿರುವವರಲ್ಲಿ ಕರ್ನಾಟಕದ ಯುವಕರ ಸಂಖ್ಯೆ ಕಡಿಮೆ ಇದೆ. ಪದವಿ ಪಡೆಯುವುದು ಹಾಗೂ ಸ್ಪ$ರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಜೀವನ ಸಾಧನೆಗಾಗಿ ಆಗಿದೆ ಎಂದರು. ವಿದ್ಯಾರ್ಥಿಗಳು ಸಿಕ್ಕ ಅವಕಾಶಗಳನ್ನು ಸದುಯೋಗಪಡಿಸಿಕೊಂಡು ಸಾಧನೆ ಮಾಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಮೈಸೂರು ವಿವಿ ಪ್ರಭಾರ ಕುಲಪತಿ ಪ್ರೊ.ದಯಾನಂದ ಮಾನೆ ಮಾತನಾಡಿ, ಹಳ್ಳಿಗಾಡಿನಿಂದ ಬರುವ ವಿದ್ಯಾರ್ಥಿಗಳಿಗೆ ಕೌಶಲ್ಯ ಇದ್ದರೂ ಸಹ ಮಾಹಿತಿಯ ಕೊರತೆಯಿಂದಾಗಿ ಕೇಂದ್ರ ಲೋಕ ಸೇವಾ ಆಯೋಗ ನಡೆಸುವ  ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ವಿಷಯದ ಬಗ್ಗೆ ಸಂಪೂರ್ಣ ಪರಿಣಿತಿ ಹೊಂದಬೇಕು.

ಜತೆಗೆ ಸಾಮಾನ್ಯ ಜಾnನವೂ ಇರಬೇಕು. ಯಶಸ್ವಿ ಬದುಕಿಗೆ ಅಡ್ಡ ದಾರಿಗಳಿಲ್ಲ. ನಾವು ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ನಮ್ಮ ಮೂಲವನ್ನು ಮರೆಯಬಾರದು.  ಹೃದಯವಂತಿಕೆ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಮೈಸೂರು ವಿವಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ವಿಶೇಷ ತರಬೇತಿ ಕೇಂದ್ರ ಸ್ಥಾಪಿಸುವ ಉದ್ದೇಶದಿಂದ 5 ಕೋಟಿ ರೂ. ಬಜೆಟ್‌ ನೀಡುವಂತೆ ರಾಜ್ಯ ಸರ್ಕಾರ ಮತ್ತು ಹಣಕಾಸು ಮಂತ್ರಿಗಳಿಗೆ ಮನವಿ ಮಾಡಲಾಗಿದೆ.

ದಿನದ 24 ಗಂಟೆಯೂ ಗ್ರಂಥಾಲಯ ತೆರೆದಿರುವಂತೆ ಯೋಜನೆ ರೂಪಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಇನ್ನೂ ಅನೇಕ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿದ್ದೇವೆ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಡಿ.ರಂದೀಪ್‌ ಮಾತನಾಡಿ, ಇಂದು ಯುವಕರಿಗೆ ಅನೇಕ ಅವಕಾಶಗಳು ಲಭ್ಯವಿವೆ. ಸಿಕ್ಕ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ನಿಮ್ಮ ಜೀವನದ ಗುರಿಯನ್ನು ನೀವೆ ನಿರ್ಧರಿಸಿಕೊಂಡು ಮುಂದೆ ಸಾಗಿ. ಪರಿಶ್ರಮವೊಂದೇ ಯಶಸ್ಸಿನ ಕೀಲಿ ಕೈ.

Advertisement

ಸಾಧನೆಯ ಹಾದಿಯಲ್ಲಿ  ಸಾಗಬೇಕಾದರೆ ಸಿದ್ಧತೆಯೂ ಮುಖ್ಯವಾಗುತ್ತದೆ. ತಪ್ಪು ದಾರಿಗಿಳಿಯದೇ, ನಾಯಕತ್ವದ ಗುಣ ಬೆಳೆಸಿಕೊಂಡು ನಿರ್ದಿಷ್ಟ ಗುರಿಯನ್ನು ತಲುಪಿ ಎಂದು ಹೇಳಿದರು. ಎಸ್‌ಸಿ, ಎಸ್‌ಟಿ ವಿಶೇಷ ಘಟಕದ ಉಪ ಕುಲಸಚಿವ ಡಾ.ಎಸ್‌.ಮಹದೇವಮೂರ್ತಿ, ಮೈಸೂರು ವಿವಿಯ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಡಾ.ಎಂ.ರುದ್ರಯ್ಯ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next