Advertisement

ಸಮಯಕ್ಕೆ ಮಹತ್ವ ನೀಡಿದರೆ ಯಶಸ್ಸು

09:04 AM Jan 11, 2019 | |

ಬೀದರ: ವಿದ್ಯಾರ್ಥಿಗಳು ಸಮಯಕ್ಕೆ ಹೆಚ್ಚು ಮಹತ್ವ ನೀಡಿದರೆ ಜೀವನದಲ್ಲಿ ಯಶಸ್ಸು ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್‌. ಮಹಾದೇವ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

Advertisement

ನಗರದ ವಿದ್ಯಾನಗರ ಬಡಾವಣೆಯ ವಿ.ಕೆ. ಇಂಟರ್‌ನ್ಯಾಷನಲ್‌ ಸಂಸ್ಥೆ ಹಾಗೂ ಲಕ್ಷ್ಮೀಬಾಯಿ ಕಮಠಾಣೆ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಡೆದ 2019ನೇ ಸಾಲಿನ ದಿನದರ್ಶಿಕೆ ಬಿಡುಗಡೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನವು ಭವಿಷ್ಯದ ಪ್ರಮುಖ ಘಟ್ಟವಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಸಮಯವನ್ನು ಸದುಪಯೋಗ ಪಡೆಸಿಕೊಂಡು ಗುರಿಯತ್ತ ಸಾಗಬೇಕು ಎಂದರು. ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸಲು ಹಾಗೂ ಜ್ಞಾನ ವೃದ್ಧಿಸಲು ವಿಜ್ಞಾನ ವಸ್ತು ಪ್ರದರ್ಶನಗಳು ಸಹಕಾರಿಯಾಗಿವೆ. ಉತ್ತಮ ಗುರಿಯೊಂದಿಗೆ ವಿದ್ಯಾಭ್ಯಾಸ ಮಾಡಿ, ಉತ್ತಮ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಬೇಕು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದುತಿಳಿಸಿದರು.

ಬಸವ ತತ್ವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೈಜಿನಾಥ ಕಮಠಾಣೆ ಮಾತನಾಡಿ, ಮೂರೂವರೆ ದಶಕದ ಹಿಂದೆ ಮಹಿಳಾ ಶಿಕ್ಷಣಕ್ಕೆ ಉತ್ತೇಜನ ನೀಡಲು ಆರಂಭಿಸಿದ ಸಂಸ್ಥೆಯು ಯಶಸ್ವಿಯಾಗಿ ಮುಂದೆ ಸಾಗುತ್ತಿದೆ. ಜಿಲ್ಲೆಯ ಶೈಕ್ಷಣಿಕ ಪ್ರಗತಿಗೂ ತನ್ನದೇ ಆದ ಕೊಡುಗೆ ನೀಡಿದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಒಂದು ಕಲೆ ಇರುತ್ತವೆ. ಅದರ ಅನಾವರಣಕ್ಕೆ ವೇದಿಕೆ ರೂಪಿಸುವ ಮೂಲಕ ವಿದ್ಯಾರ್ಥಿಗಳ ಕಲೆಗಳಿಗೂ ಪ್ರೋತ್ಸಾನ ನೀಡುವ ಕಾರ್ಯ ನಡೆಯುತ್ತಿದೆ ಎಂದರು.

ಸಂಸ್ಥೆಯ ಶಾಲಾ ಕಾಲೇಜುಗಳಲ್ಲಿ ನಿರ್ಗತಿಕ ಹಾಗೂ ಬಡ ಮಕ್ಕಳಿಗೆ ಅತ್ಯಂತ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಸಂಸ್ಥೆಯಲ್ಲಿನ ವಿದ್ಯಾರ್ಥಿಗಳು ಪ್ರತಿ ವರ್ಷ ಉತ್ತಮ ಫಲಿತಾಂಶ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

Advertisement

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಾದೇಶಿಕ ಅಧ್ಯಯನ ಕೇಂದ್ರದ ಸಂಯೋಜನಾಧಿಕಾರಿ ಡಾ| ಜಗನ್ನಾಥ ಹೆಬ್ಟಾಳೆ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಗುರಿ ಇಟ್ಟುಕೊಳ್ಳಬೇಕು. ಸತತ ಪರಿಶ್ರಮ ವಹಿಸಿ ಸಾಧನೆ ಮಾಡಬೇಕು. ಓದಿನೊಂದಿಗೆ ಇತರೆ ಎಲ್ಲ ಚಟುವಟಿಕೆಗಳಲ್ಲಿ ಭಾಗವಹಿಸಿ ಪರಿಪೂರ್ಣ ಶಿಕ್ಷಣ ಪಡೆದುಕೊಂಡರೆ ಭವಿಷ್ಯದಲ್ಲಿ ಅನೂಕುಲವಾಗುತ್ತದೆ ಎಂದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ಸಂಸ್ಥೆಯಲ್ಲಿ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ವೀಕ್ಷಿಸಿದರು. ಬೀದರ ನಗರ ಯೋಜನಾ ಪ್ರಾಧಿಕಾರದ ನಿರ್ದೇಶಕ ಬಲಭೀಮ ಕಾಂಬಳೆ, ಸಂತೋಷ ಸುಂಕದ, ಬಸವ ತತ್ವ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ| ದಿಲೀಪ ಕಮಠಾಣೆ, ಡಾ| ಸಾವಿತ್ರಿಬಾಯಿ ನೀಲಗಂಗಾ, ಲಕ್ಷ್ಮೀಬಾಯಿ ಕಮಠಾಣೆ, ರಾಜಕುಮಾರ ಹೆಬ್ಟಾಳೆ, ವೈಶಾಲಿ ಕಮಠಾಣೆ, ವಿ.ಕೆ. ಇಂಟರ್‌ನ್ಯಾಷನಲ್‌ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶಿವಲೀಲಾ ಟೊಣ್ಣೆ, ಲಕ್ಷ್ಮೀಬಾಯಿ ಕಮಠಾಣೆ ಶಿಕ್ಷಣ ಮಹಾವಿದ್ಯಾಲಯದ ಪ್ರಭಾರ ಪ್ರಾಚಾರ್ಯ ಧನರಾಜ ಪಾಟೀಲ, ಮಹಮ್ಮದ್‌ ಯುನೂಸ್‌, ಪ್ರಕಾಶ ಲಕ್ಕಶೆಟ್ಟಿ, ನಾಗೇಶ ಬಿರಾದಾರ ಹಾಗೂ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next