Advertisement

ಮೇಲ್ಮನೆ ಶಿಕ್ಷಕ ಪ್ರತಿನಿಧಿಗಳೊಂದಿಗಿನ ಮಾತುಕತೆ ಯಶಸಿ

12:48 PM Sep 28, 2017 | |

ಬೆಂಗಳೂರು: ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕರು, ಉಪನ್ಯಾಸಕರು, ಪ್ರಾಂಶುಪಾಲರು, ವಿದ್ಯಾರ್ಥಿಗಳು ಮತ್ತು ಆಡಳಿತ ಮಂಡಳಿಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ವಿಧಾನ ಪರಿಷತ್ತಿನ ಶಿಕ್ಷಕ ಕ್ಷೇತ್ರದ ಪ್ರತಿನಿಧಿಗಳು ನಡೆಸಿದ ಸಭೆ ಫ‌ಲಪ್ರದವಾಗಿದೆ.

Advertisement

ಶಿಕ್ಷಕ ಕ್ಷೇತ್ರದ ಪ್ರತಿನಿಧಿಗಳು ಮುಂದಿಟ್ಟಿದ್ದ 37 ಬೇಡಿಕೆಗಳ ಪೈಕಿ 30 ಬೇಡಿಕೆಗಳನ್ನು ಈಡೇರಿ ಸಲು ಸರ್ಕಾರ ಒಪ್ಪಿಕೊಂಡಿದೆ. ಇವುಗಳಲ್ಲಿ 1987ರಿಂದ 1995ರವರೆಗೆ ಪ್ರಾರಂಭವಾದ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ
ಕಾಲೇಜುಗಳನ್ನು ವೇತಾನುದಾನಕ್ಕೆ ಒಳಪಡಿಸಬೇಕು, ಸರ್ಕಾರಿ ನೌಕರರಿಗೆ ಇರುವಂತಹ ಜ್ಯೋತಿ ಸಂಜೀವಿನಿ ಯೋಜನೆಯನ್ನು ಎಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೂ ವಿಸ್ತರಿಸಬೇಕು ಎಂಬುದು ಪ್ರಮಖ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸೆ. 15ರಂದು ಮುಂದೂಡಲಾಗಿದ್ದ ಆಹೋರಾತ್ರಿ ಧರಣಿಯನ್ನು ವಿಧಾನ ಪರಿಷತ್ತಿನ ಶಿಕ್ಷಕ ಕ್ಷೇತ್ರದ ಪ್ರತಿನಿಧಿಗಳು ಕೈಬಿಟ್ಟಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಿಎಂ ಸಿದ್ದರಾಮಯ್ಯ, ಶಿಕ್ಷಣ ಸಚಿವ ತನ್ವೀರ್‌ ಸೇಠ್ಠ ಜತೆ ಶಿಕ್ಷಕ ಕ್ಷೇತ್ರದ ಪ್ರತಿನಿಧಿಗಳು ಶೈಕ್ಷಣಿಕ ಬೇಡಿಕೆಗಳ ಕುರಿತು ಸುದೀರ್ಘ‌ ಸಮಾಲೋಚನೆ ನಡೆಸಿದರು. ಈ ಸಂದರ್ಭ
ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿಕೊಂಡಿದೆ.

ಸಲಹೆ ಪರಿಗಣಿಸಿ ತೀರ್ಮಾನ: ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ತನ್ವೀರ್‌ ಸೇಠ್ಠ “ಶಿಕ್ಷಕರು ಮತ್ತು ಉಪಸನ್ಯಾಸಕರ ವೇತನ ತಾರತಮ್ಯ ಸರಿಪಡಿಸಲು ಕ್ರಮ ಕೈಗೊಳ್ಳ ಲಾಗುವುದು. ಕಾಲ್ಪನಿಕ ವೇತನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅಪರ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ. 

ವರ್ಗಾವಣೆ ಮಾನದಂಡಕ್ಕೆ ಸಂಬಂಧಿಸಿದಂತೆ ಶಿಕ್ಷಕ ಪ್ರತಿನಿಧಿಗಳ ಆಕ್ಷೇಪ, ಸಲಹೆಗಳನ್ನು ಪರಿಗಣಿಸಲು ಕೂಡ ತೀರ್ಮಾನಿಸಲಾಗಿದೆ. ಆದರೆ, ಖಾಸಗಿ ಶಾಲಾ ಶಿಕ್ಷಕರಿಗೂ ಸರ್ಕಾರಿ ಶಾಲಾ ವೇತನ ನೀಡಬೇಕು ಎಂಬ ಬೇಡಿಕೆ
ಈಡೇರಿಸಲು ಸಾಧ್ಯವಿಲ್ಲ ಎಂಬುದನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ’ ಎಂದು ಹೇಳಿದರು.

Advertisement

ಸೇವಾ ಜೇಷ್ಠತೆ ಮೇಲೆ ಪರಿಗಣನೆ: ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಮಾತನಾಡಿ, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿಗಳ ಅನುಪಾತ 1:70 ರಿಂದ 1:50ಕ್ಕೆ ಇಳಿಸಲು, ಪದವಿ ಕಾಲೇಜುಗಳಲ್ಲಿ ಈ ಅನು ಪಾತವನ್ನು 1:110ರಿಂದ 1:70ಕ್ಕೆ ಇಳಿಸಲು ಸರ್ಕಾರ ಒಪ್ಪಿದೆ. ಇದರಿಂದಾಗಿ ಇನ್ನೂ ಹೆಚ್ಚಿನ ಅತಿಥಿ ಉಪನ್ಯಾಸಕರು ಅಗತ್ಯ ಬೀಳಲಿದ್ದು, ಹಲವು ವರ್ಷ ಸೇವೆ ಸಲ್ಲಿಸಿ ಈ ವರ್ಷ ಹೊರಗೆ ಉಳಿದಂತಹ ಅತಿಥಿ ಉಪನ್ಯಾಸಕರನ್ನು ಸೇವಾ ಜೇಷ್ಠತೆ ಮೇಲೆ ಪರಿಗಣಿಸುವಂತೆ ಮುಖ್ಯಮಂತ್ರಿ ಯವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದರೆ, ಇದು ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next