Advertisement

ಪ್ರಯೋಗಶೀಲತೆಯಿಂದ ಸಹಕಾರ ರಂಗ ಯಶಸ್ವಿ: ನಳಿನ್‌ ಕುಮಾರ್‌

11:27 PM Jun 01, 2019 | Team Udayavani |

ಅರಂತೋಡು: ದ.ಕ. ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ವಿಶೇಷತೆ ಇದ್ದು, ಅದು ಪ್ರಯೋಗಶೀಲತೆಯಿಂದ ರಾಜ್ಯದಲ್ಲಿಯೇ ಮಾದರಿ ಸಹಕಾರ ಬ್ಯಾಂಕ್‌ಗಳಾಗಿ ಮುನ್ನಡೆಯಲು ಕಾರಣವಾಗಿದೆ ಎಂದು ಸಂಸದ ನಳಿನ್‌ಕುಮಾರ್‌ ಕಟೀಲು ಹೇಳಿದರು.

Advertisement

ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಅರಂತೋಡು-ತೊಡಿಕಾನ ವ್ಯವಸಾಯ ಸೇವಾ ಸಹಕಾರ ಸಂಘದ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು, ಸಹಕಾರ ಕೇತ್ರದಲ್ಲಿ ಸಾಧಕರ ಸೃಷ್ಟಿಯಾಗಿದೆ. ಅರಂತೋಡು -ತೊಡಿಕಾನ ವ್ಯವಸಾಯ ಸಹಕಾರ ಬ್ಯಾಂಕ್‌ ಎಲ್ಲ ಆಧುನಿಕ ಸೌಲಭ್ಯಗಳನ್ನು ಅಳವಡಿಸಿಕೊಂಡಿದ್ದು, ಇದು ರೈತರಿಗೆ ಸಹಕಾರಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ರೈತರಿಗಾಗಿ ಕೃಷಿ ಸಮ್ಮಾನ್‌ ಯೋಜನೆ ಅನುಷ್ಠಾನಗೊಳಿಸಿದ್ದು, ಅಭ್ಯುದಯಕ್ಕೆ ಪೂರಕವಾಗಿದೆ ಎಂದರು.

ಆರೋಗ್ಯ ಕೇಂದ್ರ ದತ್ತು ಪಡೆಯಿರಿ
ಸಹಕಾರ ಭವನವನ್ನು ಉದ್ಘಾಟಿಸಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌, ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ದತ್ತು ತೆಗೆದುಕೊಳ್ಳುವ ಮೂಲಕ ಅಲ್ಲಿ ಇನ್ನಷ್ಟು ಉತ್ತಮ ಸೇವೆ ನಿರೀಕ್ಷೆ ಮಾಡಲು ಸಾಧ್ಯ. ಈ ಹಿನ್ನೆಲೆಯಲ್ಲಿ ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ದತ್ತು ತೆಗೆದುಕೊಂಡು ಉತ್ತಮ ಸೇವೆ ನೀಡಿ. ಇದಕ್ಕೆ ಸರಕಾರ ಸಂಪೂರ್ಣ ಸಹಕಾರ ನೀಡುತ್ತದೆ ಎಂದು ಹೇಳಿದರು.

ಸಮಾಜದ ಬೆಳವಣಿಗೆಗೂ ಕೊಡುಗೆ
ಇಂದು ಯುವಕರಿಗೆ ವಿದೇಶ ವ್ಯಾಮೋಹ ಜಾಸ್ತಿಯಾಗಿದೆ. ಸುಸಂಸ್ಕೃತವಾದ ನಮ್ಮ ದೇಶದಲ್ಲಿ ಉದ್ಯಮಗಳನ್ನು ನಡೆಸಲು ಅವಕಾಶವಿದ್ದು, ಇಲ್ಲೇ ಸ್ವಾವಲಂಬಿಯಾಗಿ ಬದುಕು ಮುನ್ನಡೆಸಿ. ಹತ್ತು ಕೈಗಳು ಸೇರಿದಾಗ ಯಾವ ಕಾರ್ಯವೂ ವಿಫ‌ಲವಾಗುವುದಿಲ್ಲ. ಇದೇ ಕಾರಣಕ್ಕೆ ಸಹಕಾರ ಕ್ಷೇತ್ರ ಅದ್ಭುತವಾಗಿ ಬೆಳೆದಿದೆ. ಸಮಾಜದ ಬೆಳವಣಿಗೆಗೂ ಕೊಡುಗೆ ನೀಡಿದೆ ಎಂದು ಹೇಳಿದರು.

ಶಾಸಕ ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯ ಹರೀಶ್‌ ಕಂಜಿಪಿಲಿ ಇಂಟರ್‌ಲಾಕ್‌ ಉದ್ಘಾಟಿಸಿದರು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿರ್ದೇಶಕ ಕೆ.ಎಸ್‌. ದೇವರಾಜ್‌, ತಾ.ಪಂ. ಸದಸ್ಯೆ ಪುಷ್ಪಾ ಮೇದಪ್ಪ, ಸಹಕಾರ ಸಂಘಗಳ ಉಪನಿಬಂಧಕ ಡಾ| ಸುರೇಶ್‌ ಗೌಡ ಮುಖ್ಯ ಅತಿಥಿಗಳಾಗಿದ್ದರು.

Advertisement

ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ್‌, ಜಿ.ಪಂ. ಸದಸ್ಯರಾದ ಎಸ್‌.ಎನ್‌. ಮನ್ಮಥ, ಪುಷ್ಪಾವತಿ ಬಾಳಿಲ, ಶಶೀಧರ್‌ ಬೊಳ್ಳೆಟ್ಟಿ, ಎಪಿಎಂಸಿ ಅಧ್ಯಕ್ಷ ದೀಪಕ್‌ ಕುತ್ತಮೊಟ್ಟೆ, ಅರಂತೋಡು-ತೊಡಿಕಾನ ಸಹಕಾರ ಬ್ಯಾಂಕ್‌ ಪೂರ್ವಾಧ್ಯಕ್ಷ ಪಿ.ಬಿ. ದಿವಾಕರ ರೈ, ಹಾಲಿ ಉಪಾಧ್ಯಕ್ಷ ದಯಾನಂದ ಕುರುಂಜಿ, ಅರಂತೋಡು ಗ್ರಾ.ಪಂ. ಅಧ್ಯಕ್ಷೆ ಲೀಲಾವತಿ ಕೊಡಂಕೇರಿ, ಸರಕಾರಿ ಯೂನಿಯನ್‌ ಅಧ್ಯಕ್ಷ ರಮೇಶ್‌ ದೇಲಂಪಾಡಿ, ನಿರ್ದೇಶಕರು ಉಪಸ್ಥಿತರಿದ್ದರು. ಬ್ಯಾಂಕ್‌ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಿಇಒ ವಾಸುದೇವ ನಾಯಕ್‌ ವಂದಿಸಿದರು. ಕೆ.ಟಿ. ವಿಶ್ವನಾಥ್‌ ಕಾರ್ಯಕ್ರಮ ನಿರೂಪಿಸಿದರು.

ಸಾಧಕರಿಗೆ ಸಮ್ಮಾನ
ಎ.ಒ.ಎಲ್‌.ಇ. ಸುಳ್ಯ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ, ಪದ್ಮಶ್ರೀ ಗಿರೀಶ್‌ ಭಾರದ್ವಾಜ್‌, ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕರಾದ ಕೆ.ಆರ್‌. ಗಂಗಾಧರ್‌, ಉತ್ತಮ ಸೇವೆ ನೀಡುತ್ತಿರುವ ಸುಳ್ಯದ ತಹಶೀಲ್ದಾರ್‌ ಕುಂಞಿ ಅಹಮ್ಮದ್‌, ಮಾಜಿ ಅಧ್ಯಕ್ಷರು ಹಾಗೂ ಇಒಗಳನ್ನು ಬ್ಯಾಂಕ್‌ ವತಿಯಿಂದ ಸಮ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಮೊದಲು ಅರಂತೋಡು ಪೇಟೆಯಿಂದ ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ತನಕ ಆಕರ್ಷಕ ಮೆರವಣಿಗೆ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next