Advertisement

ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ

08:01 AM Jul 18, 2020 | Suhan S |

ಬೆಂಗಳೂರು: ಬೆಡ್‌ಗಳ ಕೊರತೆ, ವೈದ್ಯರ ನಿರ್ಲಕ್ಷ್ಯದಿಂದ ಸಾವುಗಳು ಸಂಭವಿಸುತ್ತಿವೆ ಎಂಬ ಅಪವಾದದ ನಡುವೆಯೂ ವೈದ್ಯರು 100 ಮಂದಿ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಟ್ವೀಟ್‌ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

“ಕೋವಿಡ್‌ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವಿಕ್ಟೋರಿಯಾ ಆಸ್ಪತ್ರೆ ಈ ಸಂದರ್ಭದಲ್ಲಿ 100ನೇ ಕೋವಿಡ್‌ ಸೋಂಕಿತ ಗರ್ಭಿಣಿಗೆ ಯಶಸ್ವಿಯಾಗಿ ಹೆರಿಗೆ ಪೂರೈಸುವ ಮೂಲಕ ಇನ್ನೊಂದು ವಿಶೇಷ ಮೈಲಿಗಲ್ಲು ಸಾಧಿಸಿದೆ. ಇದಕ್ಕೆ ಶ್ರಮಿಸಿದ ವಿಕ್ಟೊರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗೆ ನನ್ನ ಅಭಿನಂದನೆಗಳು’ ಎಂದು ಟ್ವೀಟ್‌ ಮಾಡಿದ್ದಾರೆ.

ಇನ್ನೊಂದು ಟ್ವೀಟ್‌ನಲ್ಲಿ ‘ಮಕ್ಕಳಿಗೆ ಸೋಂಕು ತಗುಲದಂತೆ ಎಚ್ಚರ ವಹಿಸಿ ಈವರೆಗೂ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಬಂದಿರುವ ಸುಮಾರು 350 ಕೋವಿಡ್‌ ಸೋಂಕಿತ ಗರ್ಭಿಣಿ. ಯರಿಗೆ ವಿಕ್ಟೋರಿಯಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ಪ್ರಕರಣಗಳನ್ನು ಹೊರತುಪಡಿಸಿ ಎಲ್ಲ ನವಜಾತ ಶಿಶುಗಳಿಗೂ ಕೋವಿಡ್‌ ನೆಗಟಿವ್‌ ಬಂದಿದ್ದು ತಾಯಂದಿರು- ಶಿಶುಗಳು ಆರೋಗ್ಯವಾಗಿದ್ದಾರೆ’ ಎಂದು ಟ್ವೀಟ್‌ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next