Advertisement

ಜಲಜೀವನ ಮಿಷನ್‌ ಯಶಸ್ವಿ ಅನುಷ್ಠಾನ: ಡಾ|ಇಟ್ನಾಳ

02:15 PM Apr 12, 2022 | Team Udayavani |

ಧಾರವಾಡ: ಜಲಜೀವನ ಮಿಷನ್‌ ಯೋಜನೆಯಡಿ ಮನೆ ಮನೆಗೆ ಕುಡಿಯುವ ನೀರಿನ ನಳದ ಸಂಪರ್ಕ ಕಲ್ಪಿಸುವ ಕಾರ್ಯ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಪಂ ಸಿಇಒ ಡಾ| ಸುರೇಶ ಇಟ್ನಾಳ ಹೇಳಿದರು.

Advertisement

ರಾಯಾಪುರದ ಖಾಸಗಿ ಹೋಟೆಲ್‌ನಲ್ಲಿ ಜಿಪಂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಯೋಗದೊಂದಿಗೆ ಜಲಜೀವನ ಮಿಷನ್‌ ಯೋಜನೆ ಅನುಷ್ಠಾನ ಕುರಿತು ತಾಂತ್ರಿಕ ಸಿಬ್ಬಂದಿಗೆ ಹಮ್ಮಿಕೊಳ್ಳಲಾದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಲಜೀವನ ಮಿಷನ್‌ ಯೋಜನೆಯ ಭೌತಿಕ ಅನುಷ್ಠಾನದ ಸಂದರ್ಭದಲ್ಲಿ ಎದುರಾಗಬಹುದಾದ ತಾಂತ್ರಿಕ ಸಮಸ್ಯೆಗಳಿಗೆ ನಿಖರ ಪರಿಹಾರ ಕಂಡುಕೊಳ್ಳಲು ತರಬೇತಿ ಕಾರ್ಯಾಗಾರ ಅಗತ್ಯವಾಗಿದೆ ಎಂದರು.

ಜಲಮೂಲ ಸುಸ್ಥಿರವಾಗಿಟ್ಟು, ನೀರು ಮಲಿನವಾಗದಂತೆ ನೋಡಿಕೊಳ್ಳಬೇಕು. ತ್ಯಾಜ್ಯ ನೀರಿನ ನಿರ್ವಹಣೆ, ಮರುಬಳಕೆ, ನೀರು ಇಂಗಿಸಿ ಅಂತರ್ಜಲ ಮಟ್ಟ ಹೆಚ್ಚಿಸುವುದು ಇಂದಿನ ಅಗತ್ಯವಾಗಿದೆ. ನೀರಿನ ಭದ್ರತೆ, ಶುದ್ಧ ಕುಡಿಯುವ ನೀರಿನ ಪೂರೈಕೆ ನಮ್ಮೆಲ್ಲರ ಹೊಣೆಯಾಗಿದೆ. ನೀರಿನ ಗುಣಮಟ್ಟದ ಪರೀûಾ ಪ್ರಯೋಗಾಲಯ ಧಾರವಾಡದಲ್ಲಿದೆ. ಗ್ರಾಮೀಣ ನೀರು ನಿರ್ವಹಣಾ ಸಮಿತಿಗಳು ಪ್ರಯೋಗಾಲಯದ ಬಳಕೆ ಮಾಡಿಕೊಳ್ಳಲು ಉತ್ತೇಜಿಸಬೇಕು ಎಂದು ಹೇಳಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಬೆಳಗಾವಿ ವೃತ್ತದ ಅಧೀಕ್ಷಕ ಅಭಿಯಂತ ಸಿ.ಜಿ. ಹುಲಮನಿ ಮಾತನಾಡಿ, ಜಲಜೀವನ್‌ ಮಿಷನ್‌ ಯೋಜನೆಯಡಿ 2023ರೊಳಗೆ ಗ್ರಾಮೀಣದ ಎಲ್ಲಾ ಮನೆಗೂ ನೀರು ತಲುಪಿಸುವ ಗುರಿ ಹೊಂದಲಾಗಿದೆ. ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

Advertisement

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿವೃತ್ತ ಅಧೀಕ್ಷಕ ಎಂಜಿನಿಯರ್‌ ಚಂದ್ರಶೇಖರ ಮಸಗುಪ್ಪಿ ಹಾಗೂ ವೆಂಕಟೇಶ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಆರ್‌.ವಿ. ಮುನವಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಡಾ| ಗಾಯಿತ್ರಿ ದೇಶಪಾಂಡೆ ನಾಡಗೀತೆ ಪ್ರಸ್ತುತಪಡಿಸಿದರು. ಶಿವಪುತ್ರ ಮಠಪತಿ ಸ್ವಾಗತಿಸಿದರು. ಜಿಲ್ಲಾ ಯೋಜನೆಯ ವ್ಯವಸ್ಥಾಪಕಿ ಮಂಜುಳಾ ಹೂಗಾರ ನಿರೂಪಿಸಿದರು. ಜಗದೀಶ ಪಾಟೀಲ ವಂದಿಸಿದರು.

 

ಗ್ರಾಮಗಳ ಪ್ರತಿ ಮನೆಗೂ ನಳದ ಸಂಪರ್ಕ ಕಲ್ಪಿಸುವ ಜತೆಗೆ ಪ್ರತಿದಿನ ಕುಡಿಯುವ ನೀರು ಸರಬರಾಜು ಮಾಡುವುದು ಮುಖ್ಯವಾಗಿದೆ. ಸದ್ಯ ಜಿಲ್ಲೆಯ 103 ಜನವಸತಿಗಳಲ್ಲಿ ಈಗಾಗಲೇ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ನರೇಗಾ ಯೋಜನೆಯಡಿ ಜಿಲ್ಲೆಯ 177 ಶಾಲಾ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಲಾಗುತ್ತಿದೆ ಎಂದರು. -ಡಾ| ಸುರೇಶ ಇಟ್ನಾಳ, ಜಿಪಂ ಸಿಇಒ

Advertisement

Udayavani is now on Telegram. Click here to join our channel and stay updated with the latest news.

Next