Advertisement
ದ.ಕ., ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಪರೀಕ್ಷೆ ನೆರವೇರಿಸಲು ಸಹಕರಿಸಿದರು. ಯಾವುದೇ ರೀತಿಯ ಗೊಂದಲಗಳಾಗದಂತೆ ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಿತ್ತು.
ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಹಾಗೂ ಅಹಿತಕರ ಘಟನೆ ತಡೆಯಲು ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ ಸೆಕ್ಷನ್ 163ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಕೇಂದ್ರಗಳ ಸುತ್ತಲಿನ 200 ಮೀ. ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಗುರುತಿಸಲಾಗಿತ್ತು. 200 ಮೀ. ವ್ಯಾಪ್ತಿಯ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲಾಗಿತ್ತು.
Related Articles
-ಕರೀಷ್ಮಾ ಪುತ್ತೂರು, ವಿದ್ಯಾರ್ಥಿನಿ
Advertisement
ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಕನ್ನಡ ಪರೀಕ್ಷೆಗೆ ಸಮರ್ಪಕ ತಯಾರಿ ನಡೆಸಿದ್ದೇನೆ. ಸರಿಯಾದ ಅಧ್ಯಯನ ನಡೆಸಿದರೆ ಪರೀಕ್ಷೆಗಳು ಕಠಿನವಾಗದು. ಸಮರ್ಪಕ ರೀತಿಯಲ್ಲಿ ಪರೀಕ್ಷೆ ಬರೆದಿದ್ದು ಉತ್ತಮ ಫಲಿತಾಂಶದ ನಿರೀಕ್ಷೆ ಇದೆ.-ಉದಯ ಹುಬ್ಬಳ್ಳಿ, ಪರೀಕ್ಷಾರ್ಥಿ