Advertisement

Examination: ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪರೀಕ್ಷೆ ಯಶಸ್ವಿ

12:06 AM Sep 30, 2024 | Team Udayavani |

ಮಂಗಳೂರು/ ಉಡುಪಿ: ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಕನ್ನಡ ಭಾಷಾ ಪರೀಕ್ಷೆಯು ಮಂಗಳೂರು ಪೊಲೀಸ್‌ ಆಯುಕ್ತರ ಕಚೇರಿ ವ್ಯಾಪ್ತಿಯ 22 ಕೇಂದ್ರಗಳಲ್ಲಿ ರವಿವಾರ ಸುಸೂತ್ರವಾಗಿ ನಡೆಯಿತು.

Advertisement

ದ.ಕ., ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಪರೀಕ್ಷೆ ನೆರವೇರಿಸಲು ಸಹಕರಿಸಿದರು. ಯಾವುದೇ ರೀತಿಯ ಗೊಂದಲಗಳಾಗದಂತೆ ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಿತ್ತು.

ಉಡುಪಿ ಜಿಲ್ಲೆಯಲ್ಲಿ 17 ಸೆಂಟರ್‌ಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆದರು. ಒಟ್ಟು 7267 ಮಂದಿ ಪರೀಕ್ಷೆಗೆ ನೋಂದಾಯಿಸಿದ್ದರು. 5388 ಮಂದಿ ಪರೀಕ್ಷೆ ಬರೆದಿದ್ದರೆ 1968 ಮಂದಿ ಗೈರುಹಾಜರಾಗಿದ್ದರು.

ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ
ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಹಾಗೂ ಅಹಿತಕರ ಘಟನೆ ತಡೆಯಲು ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ ಸೆಕ್ಷನ್‌ 163ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಕೇಂದ್ರಗಳ ಸುತ್ತಲಿನ 200 ಮೀ. ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಗುರುತಿಸಲಾಗಿತ್ತು. 200 ಮೀ. ವ್ಯಾಪ್ತಿಯ ಜೆರಾಕ್ಸ್‌ ಅಂಗಡಿಗಳನ್ನು ಮುಚ್ಚಲಾಗಿತ್ತು.

ಮೊದಲ ಬಾರಿಗೆ ಪರೀಕ್ಷೆಗೆ ಪ್ರಯತ್ನಿಸಿದ್ದೇನೆ. ನಿರೀಕ್ಷೆಯಂತೆ ಪ್ರಶ್ನೆಗಳು ಬಂದಿವೆ. ಸ್ಪರ್ಧಾತ್ಮಕ ಪರೀಕ್ಷೆಯ ಅನುಭವ ಸಿಕ್ಕಿದೆ. ಮುಂದೆ ಇತರ ಕೆಪಿಎಸ್‌ಸಿ/ಯುಪಿಎಸ್‌ಸಿ ಪರೀಕ್ಷೆಗಳಿಗೂ ಇದು ಸಹಕಾರಿಯಾಗಲಿದೆ.
-ಕರೀಷ್ಮಾ ಪುತ್ತೂರು, ವಿದ್ಯಾರ್ಥಿನಿ

Advertisement

ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಕನ್ನಡ ಪರೀಕ್ಷೆಗೆ ಸಮರ್ಪಕ ತಯಾರಿ ನಡೆಸಿದ್ದೇನೆ. ಸರಿಯಾದ ಅಧ್ಯಯನ ನಡೆಸಿದರೆ ಪರೀಕ್ಷೆಗಳು ಕಠಿನವಾಗದು. ಸಮರ್ಪಕ ರೀತಿಯಲ್ಲಿ ಪರೀಕ್ಷೆ ಬರೆದಿದ್ದು ಉತ್ತಮ ಫಲಿತಾಂಶದ ನಿರೀಕ್ಷೆ ಇದೆ.
-ಉದಯ ಹುಬ್ಬಳ್ಳಿ, ಪರೀಕ್ಷಾರ್ಥಿ

Advertisement

Udayavani is now on Telegram. Click here to join our channel and stay updated with the latest news.

Next