Advertisement
300ಕ್ಕೂ ಅಧಿಕ ಸಾವು:ಸುಡಾನ್ ಸೇನೆ ಹಾಗೂ ಅರಸೇನೆ ಪಡೆಗಳ ನಡುವಿನ ಸಂಘರ್ಷದಿಂದಾಗಿ ಈಗಾಗಲೇ 300ಕ್ಕೂ ಅಧಿಕ ಮಂದಿ ಜೀವ ಕಳೆದುಕೊಂಡಿದ್ದಾರೆ. ಕಾಳಗದಲ್ಲಿ 3,200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕದನವಿರಾಮ ಘೋಷಿಸಿ, ಶಾಂತಿ ಮಾತುಕತೆ ನಡೆಸುವಂತೆ ರ್ಯಾಪಿಡ್ ಸಪೋರ್ಟ್ ಫೋರ್ಸ್ (ಆರ್‌ಎಸ್‌ಎಫ್ ) ಘಟಕ ಸಲಹೆ ನೀಡಿತ್ತು. ಆದರೆ, ಸಲಹೆ ನಿರಾಕರಿಸಿರುವ ಸೇನೆ ಯಾವುದೇ ಕಾರಣಕ್ಕೂ ಅಧಿಕಾರದ ವಿಚಾರದಲ್ಲಿ ರಾಜಿಯಾಗುವುದಿಲ್ಲವೆಂದು ಸ್ಪಷ್ಟ ಪಡಿಸಿದೆ.
ಸುಡಾನ್‌ನಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರುವುದೇ ಸರ್ಕಾರದ ಆದ್ಯತೆ. ಈ ನಿಟ್ಟಿನಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಜತೆಗೆ ಮಾತುಕತೆ ನಡೆಸಲಿದ್ದಾರೆ ಎಂದು ಸಚಿವಾಲಯದ ವಕ್ತಾರ ಅರಿಂಧಮ್ ಬಗಿc ನವದೆಹಲಿಯಲ್ಲಿ ತಿಳಿಸಿದ್ದಾರೆ. ಸದ್ಯ ಆ ದೇಶದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಅಲ್ಲಿನ ಸ್ಥಳೀಯ ಪರಿಸ್ಥಿತಿ ಸುಧಾರಿಸಬೇಕಿದೆ ಎಂದು ಹೇಳಿದ್ದಾರೆ.