Advertisement

ಈ ವಾರ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ ಸುದೀಪ್ : ಕಿಚ್ಚ ಸ್ಪಷ್ಟನೆ

02:34 PM Apr 16, 2021 | Team Udayavani |

ಬೆಂಗಳೂರು : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಈ ವಾರ ನಡೆಯಬೇಕಿದ್ದ ಬಿಗ್ ಬಾಸ್ ವೀಕೆಂಡ್‍ ಎಪಿಸೋಡ್‍ನಲ್ಲಿ ಭಾಗಿಯಾಗುವುದಿಲ್ಲ ಎಂದು ನಟ ಸುದೀಪ್ ಸ್ಪಷ್ಟಪಡಿಸಿದ್ದಾರೆ.

Advertisement

ಇನ್ನು ನಿನ್ನೆಯಿಂದ ಸುದ್ದಿಯೊಂದು ಹರಿದಾಡಿದ್ದು, ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಚಿಕಿತ್ಸೆ ಪಡೆದು ರೆಸ್ಟ್ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡಿತ್ತು. ಈ ವಿಚಾರವಾಗಿ ಟ್ವೀಟ್ ಮೂಲಕ ನಟ ಸುದೀಪ್ ಸ್ವಷ್ಟನೆ ನೀಡಿದ್ದಾರೆ.

ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಸುದೀಪ್, ನನಗೆ ಆರೋಗ್ಯ ಸರಿಯಿಲ್ಲ. ಸದ್ಯದಲ್ಲೇ ಗುಣಮುಖನಾಗುತ್ತೇನೆ ಎಂಬ ಭರವಸೆಯಿದೆ. ವೈದ್ಯರು ಕೆಲವು ದಿನಗಳ ಕಾಲ ರೆಸ್ಟ್ ಮಾಡು ಎಂದಿದ್ದಾರೆ. ಹೀಗಾಗಿ ಬಿಗ್ ಬಾಸ್ ಸೀಸನ್ 8ರ ಈ ವೀಕೆಂಡ್ ಎಪಿಸೋಡ್ ನಲ್ಲಿ ನಾನು ಪಾಲ್ಗೊಳ್ಳುವುದಿಲ್ಲ ಎಂದಿದ್ದಾರೆ.

ಬಿಗ್ ಬಾಸ್ ತಂಡ ವಾರದ ಕತೆ ಕಿಚ್ಚನ ಜೊತೆಯ  ಬದಲಾಗಿ ಯಾವ ಪ್ಲಾನ್ ಮಾಡುತ್ತದೆ ಎಂಬ ಬಗ್ಗೆ ನನಗೂ ಕುತೂಹಲವಿದೆ. ಈ ವಾರದ ಎಲಿಮಿನೇಷನ್ ಪ್ರಕ್ರಿಯೆ ಹೇಗಾಗಲಿದೆ ಎಂಬುದನ್ನು ಕಾದು ನೋಡಿ ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿ ತಿಳಿಸಿದ್ದಾರೆ. ಸುದೀಪ್ ಅಭಿಮಾನಿಗಳು ತಮ್ಮ ನೆಚ್ಚನ ನಟ ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next