Advertisement

ನಾಡ ಹಬ್ಬಕ್ಕೆ ‘ಕೋಟಿಗೊಬ್ಬ’ನ ಆಗಮನ

07:34 PM Sep 26, 2021 | Team Udayavani |

ಬೆಂಗಳೂರು: ಅಭಿನಯ ಚಕ್ರವರ್ತಿ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾ ಬಿಡುಗಡೆಯ ದಿನಾಂಕವನ್ನ ಚಿತ್ರತಂಡ ಅನೌನ್ಸ್ ಮಾಡಿದೆ. ಚಿತ್ರ ಇದೇ ಅಕ್ಟೋಬರ್ 14ರಂದು ಬೆಳ್ಳಿ ಪರದೆಗೆ ಎಂಟ್ರಿ ಕೊಡಲಿದೆ.

Advertisement

ಇಂದು ಸಂಜೆ ಟ್ವಿಟ್ ಮಾಡುವ ಮೂಲಕ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ನಾಡಹಬ್ಬ ದಸರಾ ನಿಮಿತ್ತ ಚಿತ್ರಮಂದಿರಗಳಲ್ಲಿ ಕೋಟಿಗೊಬ್ಬ 3 ಸಿನಿಮಾ ಬಿಡುಗಡೆಯಾಗಲಿದೆ.

ಕೋಟಿಗೊಬ್ಬ-2 ಚಿತ್ರದಲ್ಲಿ ಸತ್ಯ ಹಾಗೂ ಶಿವ ಪಾತ್ರದಲ್ಲಿ ಸುದೀಪ್ ಅವರನ್ನು ಕಣ್ತುಂಬಿಕೊಂಡಿದ್ದ ಅಭಿಮಾನಿಗಳು ಕೋಟಿಗೊಬ್ಬ 3 ಮೇಲೆ ಭಾರೀ ನಿರೀಕ್ಷೆಯನ್ನಿಟ್ಟುಕೊಂಡಿದ್ದಾರೆ.  ರಿಲೀಸ್ ಡೇಟ್ ಕೇಳುತ್ತಿದ್ದಂತೆ ಪೈಲ್ವಾನ್ ನ ಅಭಿಮಾನಿಗಳ ಬಳಗ  ಫುಲ್ ಖುಷಿಯಾಗಿದೆ.

ಇನ್ನು ಶಿವ ಕಾರ್ತಿಕ್ ಆ್ಯಕ್ಷನ್ ಕಟ್ ಹೇಳಿರುವ ಕೋಟಿಗೊಬ್ಬ-3 ಸಿನಿಮಾದಲ್ಲಿ ಸುದೀಪ್ ಗೆ ನಾಯಕಿಯಾಗಿ ಮಡೋನಾ ಸೆಬಾಸ್ಟಿಯನ್ ನಟಿಸಿದ್ದಾರೆ. ಶ್ರದ್ಧಾ ದಾಸ್, ಅಫ್ತಾಬ್ ಶಿವದಾಸನಿ, ರವಿ ಶಂಕರ್, ಆಶಿಕಾ ರಂಗನಾಥ್ ಸೇರಿದಂತೆ ದೊಡ್ಡ ತಾರಾ ಬಳಗವನ್ನು ಹೊಂದಿದೆ. ಬಾಲಿವುಡ್ ನಟ ಅಫ್ತಾಬ್ ಶಿವದಾಸನಿ ಮೊದಲ ಬಾರಿಗೆ ಕನ್ನಡಕ್ಕೆ ಬಂದಿದ್ದಾರೆ. ಶಿವದಾಸನಿ ಪೊಲೀಸ್ ಪಾತ್ರದಲ್ಲಿ ಮಿಂಚಿದ್ದಾರೆ. ಚಿತ್ರಕ್ಕೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತವಿದೆ.

Advertisement

ಇನ್ನು ಅಕ್ಟೋಬರ್ 14 ರಂದು ಕನ್ನಡದ ಮತ್ತೊಂದು ಸಿನಿಮಾ ಬಿಡುಗಡೆಯಾಗುತ್ತಿದೆ. ದುನಿಯಾ ವಿಜಯ್ ಅವರು ನಿರ್ದೇಶನ ಮಾಡಿ ಅಭಿನಯಿಸಿರುವ ಸಲಗ ಸಿನಿಮಾ ಕೂಡ ದಸರಾ ಹಬ್ಬಕ್ಕೆ ರಿಲೀಸ್ ಆಗುತ್ತಿದೆ. ಇಬ್ಬರು ಸ್ಟಾರ್ ಸಿನಿಮಾ ಒಂದೇ ದಿನ ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳಿಗೆ ಖುಷಿ ಸಂಗತಿಯಾದರೂ ಕೂಡ ಚಿತ್ರಮಂದಿರಗಳ ಕೊರತೆ ಎದುರಾಗಬಹುದು ಎನ್ನುವ ಆತಂಕ ಶುರುವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next