Advertisement

BJP: ಪಕ್ಷ ಬಿಡುವುದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ಕೊಟ್ಟ ಸುಧಾಕರ್‌

09:31 PM Feb 22, 2024 | Suhan S |

ಬೆಂಗಳೂರು: ಪಕ್ಷ ತ್ಯಾಗದ ಬಗ್ಗೆ  ಹಬ್ಬಿದ್ದ ವದಂತಿಗಳ ಬಗ್ಗೆ ಮಾಜಿ ಸಚಿವ ಡಾ.ಕೆ.ಸುಧಾಕರ್‌ ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟನೆ ನೀಡಿದ್ದು, ಬಿಜೆಪಿ ತೊರೆಯುವ ಉದ್ದೇಶ ಹಾಗೂ ಅವಶ್ಯಕತೆ ನನಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisement

ಕಳೆದೆರಡು ದಿನಗಳಿಂದ ವಿಧಾನಸಭೆಯ ಮೊಗಸಾಲೆಯಲ್ಲಿ ಸುಧಾಕರ್‌ ಬಿಜೆಪಿ ತೊರೆಯುತ್ತಾರೆಂಬ ಗುಸುಗುಸು ಜೋರಾಗಿ ಕೇಳಿ ಬಂದಿತ್ತು. ಅವರನ್ನು ಮರಳಿ ಕಾಂಗ್ರೆಸ್‌ಗೆ ಕರೆ ತಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಸುವ ಬಗ್ಗೆ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂಬ ಮಾಹಿತಿಗಳು ಕೇಳಿ ಬಂದಿತ್ತು.

ಇದೆಲ್ಲದರ ಹಿನ್ನೆಲೆಯಲ್ಲಿ ಸುಧಾಕರ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸ್ಪಷ್ಟನೆ ಬರೆದುಕೊಂಡಿದ್ದಾರೆ. ಪ್ರಧಾನಿ ಮೋದಿ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯತೆ, ಸಾಂಸ್ಕೃತಿಕ ಪುನರುತ್ಥಾನದ ತತ್ವ-ಸಿದ್ಧಾಂತದ ಮೇಲೆ ನಂಬಿಕೆ ಇಟ್ಟು ನಾನು ಬಿಜೆಪಿ ಸೇರಿದ್ದೇನೆ. ಬಿಜೆಪಿ ತೊರೆಯುವ ಯೋಚನೆಯಾಗಲಿ, ಉದ್ದೇಶವಾಗಲಿ ನನಗಿಲ್ಲ. ಜನರನ್ನು ದಿಕ್ಕು ತಪ್ಪಿಸುವ ಉದ್ದೇಶದಿಂದ ನಾನು ಪಕ್ಷ ಬಿಡುತ್ತೇನೆಂಬ ಊಹಾಪೋಹವನ್ನು ಕೆಲವರು ಪದೇಪದೆ ಹುಟ್ಟು ಹಾಕುತ್ತಿದ್ದು, ಯಾರೂ ಇದಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next