Advertisement
ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ಬಿಜೆಪಿಯಲ್ಲಿ ಈ ಬಾರಿ ಎಂತೆಂತಹ ನಾಯಕರಿಗೆ ಟಿಕೆಟ್ ತಪ್ಪಿದೆ. ಆದರೆ ಒಬ್ಬ ಸಾಮಾನ್ಯ ಟ್ಯೂಷನ್ ಟೀಚರ್ ವಿರುದ್ಧ ಸೋತ ವ್ಯಕ್ತಿಗೆ ಯಾಕೆ ಟಿಕೆಟ್ ನೀಡಿದರು ಎನ್ನುವುದೇ ಆಶ್ವರ್ಯ. ರಾಜ್ಯದ ಕೆಲವು ಬಿಜೆಪಿ ನಾಯಕರಿಗೆ ಸೂರ್ಯ ನಮಸ್ಕಾರ, ಶವಾಸನ, ಕಪಾಲಿಪಾತಿ, ದೀರ್ಘ ದಂಡ ನಮಸ್ಕಾರ ಈ ರೀತಿಯ ಸೇವೆಯನ್ನು ಮಾಡಿರುವ ಕಾರಣ ಟಿಕೆಟ್ ಸಿಕ್ಕಿರಬಹುದು ಎಂದು ಒಗಟಿನಂತೆ ಟೀಕಿಸಿದರು.
ಬೆಂಗಳೂರು/ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ಸಿಕ್ಕಿರುವ ಹಿನ್ನೆಲೆಯಲ್ಲಿ ಬಿಜೆಪಿ ವರಿಷ್ಠರಾದ ಬಿಎಸ್‌ವೈ, ಬೊಮ್ಮಾಯಿ ಸಹಿತ ಹಲವು ಹಿರಿಯ ನಾಯಕರನ್ನು ಭೇಟಿ ಮಾಡಿರುವ ಮಾಜಿ ಸಚಿವ ಡಾ| ಕೆ.ಸುಧಾಕರ್ ಅವರು ಚುನಾವಣ ತಂತ್ರಗಾರಿಕೆ ಕುರಿತು ಚರ್ಚೆ ನಡೆಸಿದ್ದಾರೆ.
Related Articles
Advertisement
ರವಿವಾರ ರಾತ್ರಿ ತಮಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಆದ ಬೆನ್ನಲ್ಲೇ ಸೋಮವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯನ್ನು ಬೇಟಿ ಮಾಡಿ ಅಶೀರ್ವಾದ ಪಡೆದರು. ಇದಕ್ಕೂ ಮೊದಲು ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಚಿವ ಎಂಟಿಬಿ ನಾಗರಾಜ್ ಮತ್ತಿತರ ಹಿರಿಯ ನಾಯಕರನ್ನು ಭೇಟಿ ಮಾಡಿದರು.
15 ವರ್ಷಗಳಿಂದ ನಾನು ಚಿಕ್ಕಬಳ್ಳಾಪುರದ ಜನತೆಯ ಮನೆ ಮಗನಾಗಿ, ಸೇವಕನಾಗಿ ಅವರ ಸೇವೆ ಮಾಡುತ್ತಾ ಬಂದಿದ್ದೇನೆ. 10 ವರ್ಷಗಳ ಕಾಲ ಜನಪ್ರತಿನಿಧಿಯಾಗಿ ಚಿಕ್ಕಬಳ್ಳಾಪುರದ ಜನತೆಯ ಅಪೇಕ್ಷೆ, ಆಕಾಂಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು.