Advertisement

ಹೆಲ್ತ್‌ ರಿಜಿಸ್ಟರ್‌ ಯೋಜನೆಗೆ ಸುಧಾಕರ್‌ ಚಾಲನೆ

05:40 AM May 28, 2020 | Lakshmi GovindaRaj |

ಬೆಂಗಳೂರು: “ಆರೋಗ್ಯ ಕರ್ನಾಟಕ’ಕ್ಕೆ ವೇದಿಕೆ ಕಲ್ಪಿಸಲಿರುವ “ಹೆಲ್ತ್ ರಿಜಿಸ್ಟರ್‌’ ಯೋಜನೆ ಅನುಷ್ಠಾನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಬುಧವಾರ ಚಾಲನೆ ನೀಡಿದರು.

Advertisement

ಸರ್ಕಾರ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ  ಹೆಲ್ತ್ ರಿಜಿಸ್ಟರ್‌ ಯೋಜನೆ ಸಂಬಂಧ ಆರೋಗ್ಯ ವಲಯದ ತಜ್ಞರ ಜತೆ ಸಚಿವ ಸುಧಾಕರ್‌ ಮೊದಲ ಸಭೆ ನಡೆಸಿ ಮಾಹಿತಿ ವಿನಿಮಯ ಮಾಡಿಕೊಂಡರು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದು ಗಣತಿ ಮಾದರಿಯ ಮನೆ  ಮನೆಗೂ ತೆರಳಿ ಮಾಹಿತಿ ಪಡೆಯಬೇಕಿರುವ ಕಾರ್ಯಕ್ರಮ. ಪ್ರಾಯೋಗಿಕವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯೋಜನೆ ಜಾರಿಗೊಳಿಸಲಾಗು ವುದು ಎಂದು ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ  ಮುಖ್ಯಕಾರ್ಯದರ್ಶಿ ಜಾವೇದ್‌ ಅಖ್ತರ್‌, ರಾಜೀವ್‌ ಗಾಂಧಿ ಆರೋಗ್ಯ ವಿವಿಯ ಡಾ. ಸಚ್ಚಿದಾನಂದ, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಗಿರೀಶ್‌, ಆರೋಗ್ಯ ಇಲಾಖೆ ಜಂಟಿ ನಿರ್ದೇಶಕ ಡಾ. ಪ್ರಕಾಶ್‌, ಬೆಂಗಳೂರು ವಿವಿ ಮಾಜಿ  ಕುಲಪತಿ ಡಾ. ಪ್ರಭುದೇವ್‌, ಸಾರ್ವಜನಿಕ ಆರೋಗ್ಯ ವಿಭಾಗದ ತಜ್ಞರಾದ ಡಾ. ಎಂ.ಕೆ. ಸುದರ್ಶನ್‌ ತಜ್ಞ ವೈದ್ಯರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next