Advertisement

ಮಾಲಿನ್ಯ ನಿಯಂತ್ರಣ ಮಂಡಳಿಗೆ ಗುಡ್ ಬೈ ಹೇಳಿದ ಅರ್ನಹ ಶಾಸಕ ಸುಧಾಕರ್

09:19 AM Sep 22, 2019 | Sriram |

ಚಿಕ್ಕಬಳ್ಳಾಪುರ: ಕ್ಷೇತ್ರದ ಅರ್ನಹ ಶಾಸಕ ಡಾ.ಕೆ.ಸುಧಾಕರ್, ಮೈತ್ರಿ ಸರ್ಕಾರದಲ್ಲಿ ನೇಮಕವಾಗಿದ್ದ ಮಹತ್ವದ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

Advertisement

ಬೆಂಗಳೂರಿನಲ್ಲಿ ಶನಿವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿದ ಸುಧಾಕರ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.

ಕಾಂಗ್ರೆಸ್ ಶಾಸಕರಾಗಿದ್ದ ಡಾ.ಕೆ.ಸುಧಾಕರ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಲು ಸಾಕಷ್ಟು ಹೋರಾಟ ನಡೆಸಿದ್ದರು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಶಿಪಾರಸ್ಸಿನಂತೆ ಸಿಎಂ ಆಗಿದ್ದ ಕುಮಾರಸ್ವಾಮಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಿದ್ದರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾಲಿನ್ಯ ನಿಯಂತ್ರಣ ಮಂಡಳಿಗೂ ರಾಜೀನಾಮೆ ನೀಡುವಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದರು. ಇದೀಗ ಉಪ ಚುನಾವಣೆ ಘೋಷಣೆ ಬೆನ್ನಲೇ ಸುಧಾಕರ್ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಕುತೂಹಲ ಕೆರಳಿಸಿದೆ

Advertisement

Udayavani is now on Telegram. Click here to join our channel and stay updated with the latest news.

Next