Advertisement

ಡಬ್ಲುಎಚ್ ಒ ಘೋಷಿಸುವ ಕೋವಿಡ್ ಲಸಿಕೆಯೇ ಅಧಿಕೃತ: ಸಚಿವ ಕೆ. ಸುಧಾಕರ್

01:48 PM Nov 21, 2020 | keerthan |

ಬೆಳಗಾವಿ: ಕೋವಿಡ್-19 ಲಸಿಕೆ ಬಗ್ಗೆ ಮೂರನೇ ಹಂತದ ಪರೀಕ್ಷೆ ನಡೆಸುತ್ತಿರುವ ಕಂಪನಿಗಳೊಂದಿಗೆ ಕೇಂದ್ರ ಸರ್ಕಾರ ಸಮಾಲೋಚನೆ ನಡೆಸಿದೆ. ವಿಶ್ವ ಆರೋಗ್ಯ ಸಂಸ್ಥೆ ಘೋಷಿಸುವ ಲಸಿಕೆಯನ್ನೇ ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.

Advertisement

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾತನಾಡಿದ ಅವರು, ಕೋವಿಡ್ ಲಸಿಕೆ ಇನ್ನೂ ಅಧಿಕೃತವಾಗಿ ಬಿಡುಗಡೆ ಆಗಿಲ್ಲ. ಲಸಿಕೆ ಸಿದ್ದಪಡಿಸುವ ಕಂಪನಿ ಜತೆಗೆ ಕೇಂದ್ರ ಸರ್ಕಾರ ಸಂಪರ್ಕ ಸಾಧಿಸಿದೆ. ಶೀಘ್ರದಲ್ಲೇ ದೊಡ್ಡ ಪ್ರಮಾಣದಲ್ಲಿ ಲಸಿಕೆ ದೇಶಕ್ಕೆ ಸಿಗಲಿದೆ‌ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಬಗ್ಗೆ ಇಂದು ಸಭೆ ನಡೆಸಲಾಗುವುದು. ನಂತರ ಹುಬ್ಬಳ್ಳಿ, ಧಾರವಾಡದಲ್ಲಿ ಸಭೆ ನಡೆಸಲಾಗುವುದು. ಆರೋಗ್ಯ ಇಲಾಖೆಯ ಸುಧಾರಣೆಗಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ‌. ಲಸಿಕೆ ಸಂಗ್ರಹಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಕೇಂದ್ರ ಆರೋಗ್ಯ ಸಚಿವರ ಜತೆಗೆ ಈಗಾಗಲೇ ವಿಡಿಯೋ ಕಾನ್ಪರೆನ್ಸ್ ಮಾಡಲಾಗಿದೆ. ಕೋವಿಡ್ ಲಸಿಕೆ ಇನ್ನೂ ಬಿಡುಗಡೆ ಆಗಿಲ್ಲ, ಅಧಿಕೃತ ಆದನಂತರ ನಿಮಗೂ ಗೊತ್ತಾಗುತ್ತದೆ ಎಂದರು.

ಇದನ್ನೂ ಓದಿ:ಸದ್ದಿಲ್ಲದೇ ಶುರುವಾಗಿದೆ ಪ್ರಚಾರ: ಪಶ್ಚಿಮಬಂಗಾಳದಲ್ಲಿ ಮಮತಾ v/s ಬಿಜೆಪಿ ಚುನಾವಣಾ ರಣತಂತ್ರ!

Advertisement

ಭಾರತ ದೇಶದಲ್ಲಿ ದೊಡ್ಡ ಮಟ್ಟಿಗೆ ಲಸಿಕೆ ಸಿಗುವ ಕೆಲಸ ಆಗುತ್ತದೆ, ಆರೋಗ್ಯ ಇಲಾಖೆಯಲ್ಲಿ ಜನಪರ ಬದಲಾವಣೆಗಳು ನಡೆಯುತ್ತಿವೆ. ಅಂತಾರಾಷ್ಟ್ರೀಯ ಗುಣಮಟ್ಟದ 108 ಆ್ಯಂಬುಲೆನ್ಸ್ ಸರ್ವೀಸ್‌ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಕಾಲೇಜಿನ ವಿದ್ಯಾರ್ಥಿಗಳು ಹಾಗೂ ನಾವು ಯಾರೂ ಹೊರತಾಗಿಲ್ಲ, ಎಷ್ಟು ಕಾಲೇಜು ವಿದ್ಯಾರ್ಥಿಗಳಿಗೆ ಸೋಂಕು ಬಂದಿದೆ ನಿಖರ ಮಾಹಿತಿ ಇಲ್ಲ, ಉನ್ನತ ಶಿಕ್ಷಣ ಸಚಿವರ ಜೊತೆ ಮಾತನಾಡಿ ಮಾಹಿತಿ ಪಡೆಯುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next