Advertisement

ಸುಧಾಕರ್ ರಾಜೀನಾಮೆ ಹೇಳಿಕೆ: ಸಂಸದ ಮೊಯ್ಲಿ ಮನೆ ಮೇಲೆ ಕಲ್ಲು ತೂರಾಟ 

08:37 AM Jul 07, 2017 | Team Udayavani |

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಶಾಸಕ ಕೆ. ಸುಧಾಕರ್ ತಮ್ಮ  ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ ಬೆನ್ನಲೇ ಕಾಂಗ್ರೆಸ್ ಕಾರ್ಯಕರ್ತರು ಸಂಸದ ವೀರಪ್ಪ ಮೊಯ್ಲಿ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. 

Advertisement

ಶಾಸಕ ಸುಧಾಕರ್ ರಾಜೀನಾಮೆ ನೀಡುವುದಾಗಿ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದರು. ರಾಜೀನಾಮೆಗೆ ಸಂಸದ ವೀರಪ್ಪ ಮೊಯ್ಲಿ ಕಾರಣ ಎಂದು ಆಕ್ರೋಶಗೊಂಡ  ಬೆಂಬಲಿಗರು ಚಿಕ್ಕಬಳ್ಳಾಪುರ ನಗರದ ಶಂಕರಮಠದಲ್ಲಿರುವ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿರುವ ಸುಧಾಕರ್ ತಂದೆ ಕೇಶವ್ ರೆಡ್ಡಿಯವರು ತಮ್ಮ ಸ್ಥಾನದಿಂದ ಕೆಳಗಿಳಿಯುವಂತೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸೂಚನೆ ನೀಡಿದ್ದರು. ಇದರಿಂದ ಬೇಸರಗೊಂಡ ಸುಧಾಕರ್  ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿಕೊಂಡಿದ್ದರು. 

ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.  

Advertisement

Udayavani is now on Telegram. Click here to join our channel and stay updated with the latest news.

Next